ಪುತ್ತೂರು: ಸಮಾಜದಲ್ಲಿ ವೈದ್ಯರು ಮತ್ತು ವಕೀಲರು ಘನತೆಯನ್ನು ಹೊಂದಿರುವಂತಹ ವ್ಯಕ್ತಿಗಳಾಗಿದ್ದಾರೆ. ಜನರ ದಿನಚರಿಯ ಆಗು-ಹೋಗುಗಳಲ್ಲಿ ಇವರ ಪಾತ್ರ ಮಹತ್ತರವಾಗಿದೆ ಎಂದು ಇಲ್ಲಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕ ಕೌಶಿಕ್ ಸಿ. ಹೇಳಿದರು.
ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಕಾನೂನಿನ ಕುರಿತು ಆಯೋಜಿಸಿದ ಮಾಹಿತಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗುರುವಾರ ಅವರು ಮಾತನಾಡಿದರು.
ಕಾನೂನನ್ನು ಎಲ್ಲರೂ ಪಾಲಿಸಬೇಕು. ಪ್ರತಿಯೊಂದು ತಪ್ಪಿಗೂ ಕಾನೂನಿನಲ್ಲಿ ಶಿಕ್ಷೆ ಇದೆ. ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ. ಕಾನೂನು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಎಂದು ಎಲ್ಲರು ಅರಿತುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣುಗಣಪತಿ ಭಟ್ ,ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶ್ರೀನಾಥ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕರಾದ ರಕ್ಷಿತಾ ಸ್ವಾಗತಿಸಿ ವಂದಿಸಿ, ಅನುಷಾ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ