|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೊರಗಜ್ಜನ ಅಪಹಾಸ್ಯ: ಸಾಮೂಹಿಕ ಪ್ರಾರ್ಥನೆಗೆ ಕರೆ

ಕೊರಗಜ್ಜನ ಅಪಹಾಸ್ಯ: ಸಾಮೂಹಿಕ ಪ್ರಾರ್ಥನೆಗೆ ಕರೆ



ಪುತ್ತೂರು: ಸ್ವಾಮಿ ಕೊರಗಜ್ಜನ ಅಪಹಾಸ್ಯ ಪ್ರಕರಣಕ್ಕೆ ಸಂಬಂದಿಸಿ ಆರೋಪಿಗಳಿಗೆ ಸರಿಯಾದ ಶಿಕ್ಷೆಯಾಗುವಂತೆ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಜ.11 ರಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. 


ಕಳೆದ ಹಲವಾರು ಸಮಯಗಳಿಂದ ಹಿಂದೂಗಳ ಆರಾಧ್ಯ ದೈವ, ದೇವರನ್ನು ಅಪಹಾಸ್ಯ ಮಾಡುವುದು, ನಿಂದನೆ ಮಾಡುವುದು, ಅಶ್ಲೀಲ ಚಿತ್ರಗಳನ್ನು ಬಿಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು, ಪವಿತ್ರ  ನಾಗನ ಕ್ಷೇತ್ರಗಳನ್ನು ಅಪವಿತ್ರಗೊಳಿಸುವುದು, ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳ ಕಾಣಿಕೆ ಡಬ್ಬಿಗಳಿಗೆ ಬೇಡದ ವಸ್ತುಗಳನ್ನು ಹಾಕಿ ಅಪವಿತ್ರಗೊಳಿಸುವುದು, ಮುಂದುವರಿದ ಭಾಗವಾಗಿ ಸ್ವಾಮಿ ಕೊರಗಜ್ಜನ ವೇಷ ಹಾಕಿ ವಿಚಿತ್ರವಾಗಿ ಕುಣಿದು ವಿಕೃತ ಸಂತೋಷಪಡುವ ಘಟನೆಗಳು ಲಕ್ಷಾಂತರ ಹಿಂದೂಗಳ ಮನಸ್ಸಿಗೆ ನೋವನ್ನುಟು ಮಾಡಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ.


ಈ ಎಲ್ಲಾ ಕೃತ್ಯಗಳನ್ನು ಖಂಡಿಸಿ ದೈವ ದೇವರುಗಳ ಮೊರೆ ಹೋಗಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು ಮತ್ತು ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಸಾಮೂಹಿಕ ಪ್ರಾರ್ಥನೆಗೆ ಕರೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,ಕಾಸರಗೋಡು ಜಿಲ್ಲೆಯ ಎಲ್ಲಾ ದೈವಸ್ಥಾನ, ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಂಗಳವಾರದಂದು ನಡೆಸಲು ಸಮಸ್ತ ಹಿಂದೂ ಬಂಧುಗಳಲ್ಲಿ ವಿಶ್ವ ಹಿಂದೂ ಪರಿಷತ್ ವಿನಂತಿಸಿದೆ.


ದೈವಸ್ಥಾನ, ದೇವಸ್ಥಾನದ ಆಡಳಿತ ಮಂಡಳಿ, ಧಾರ್ಮಿಕ ಮುಖಂಡರು, ಸಂಘಟನೆಗಳು, ಸಂಘ ಸಂಸ್ಥೆಗಳು, ಭಕ್ತರು, ಸಮಸ್ತ ಹಿಂದೂಗಳು ಒಟ್ಟು ಸೇರಿ ನಮ್ಮ ನಮ್ಮ ಊರುಗಳ ದೈವಸ್ಥಾನ ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post