ಮೂಡುಬಿದಿರೆ: ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಖೋಖೋ ಪಂದ್ಯಾಟದಲ್ಲಿ ಸತತ 12ನೇ ಬಾರಿಗೆ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪಂದ್ಯಾಟ ನಡೆದಿತ್ತು.
ಫೈನಲ್ ಪಂದ್ಯದಲ್ಲಿ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 13-2 ಹಾಗೂ ಇನ್ನಿಂಗ್ಸ್ ಅಂತರದಲ್ಲಿ ಸೋಲಿಸಿ ಆಳ್ವಾಸ್ ಕಾಲೇಜು ಮಹಿಳೆಯರ ತಂಡ ಗೆಲುವಿನ ನಗೆ ಬೀರಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ