ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ

Upayuktha
0

 

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್‌ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅವರು ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಿದರು. ಈಕೆ ವಿಟ್ಲದ ಅರುಣ್ ಮತ್ತು ವಿಜಯಲಕ್ಷ್ಮಿ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top