|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ|| ಚೂಂತಾರು ಅವರಿಗೆ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿ

ಡಾ|| ಚೂಂತಾರು ಅವರಿಗೆ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿ



ಕಲಬುರಗಿ: ಮಂಗಳೂರಿನ ದಂತ ವೈದ್ಯ ಹಾಗೂ ವೈದ್ಯ ಸಾಹಿತಿ ಡಾ|| ಮುರಲೀ ಮೋಹನ್ ಚೂಂತಾರು ಅವರಿಗೆ ಕಲಬುರಗಿಯ ಡಾ|| ಪಿ.ಎಸ್ ಶಂಕರ ಪ್ರತಿಷ್ಠಾನ ಕೊಡಮಾಡುವ 2021ನೇ ಸಾಲಿನ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿಯನ್ನು ಜ.1ರಂದು, ಶನಿವಾರ ಕಲಬುರಗಿಯ ವಿಶ್ವೇಶ್ವರಯ್ಯ ಭವನದಲ್ಲಿ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ|| ಎಂ.ಕೆ ಸುದರ್ಶನ್ ಅವರಿಗೆ ವೈದ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಜೆ.ಎಂ ವಿಜಯ ಕುಮಾರ ಅತಿಥಿಯಾಗಿದ್ದರು. ಪ್ರತಿಷ್ಠಾನದ ಅಧ್ಯಕ್ಷೆ ಅಂಬಿಕಾ ಶಂಕರ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ವಿವಿ ಕುಲಪತಿ ಪ್ರೊ. ದಯಾನಂದ ಅಗಸರ, ಹಿರಿಯ ವೈದ್ಯರಾದ ಡಾ|| ಮಹಾದೇವ, ಡಾ|| ಶರಣಬಸಪ್ಪ ಹರವಾಳ, ಬಸವರಾಜ ಭೀಮಳ್ಳಿ, ಡಾ|| ಪಿ.ಎಸ್. ಶಂಕರ ಮತ್ತು ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಬಡಶೇಷಿ ಮೊದಲಾದವರು ಉಪಸ್ಥಿತರಿದ್ದರು.

ಡಾ|| ಮುರಲೀ ಮೋಹನ್ ಚೂಂತಾರು ಅವರ ವೈದ್ಯಕೀಯ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ನಿರಂತದ ಸೇವೆ ಮತ್ತು ಜನ ಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ವೈದ್ಯಕೀಯ ಶಿಬಿರಗಳ ಆಯೋಜನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಡಾ|| ಚೂಂತಾರು ಅವರು ಈವರೆಗೆ 12 ವೈದ್ಯಕೀಯ ಕೃತಿಗಳನ್ನು ರಚಿಸಿರುತ್ತಾರೆ ಮತ್ತು ಸುಮಾರು 300ಕ್ಕೂ ಹೆಚ್ಚು ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿರುತ್ತಾರೆ.


0 Comments

Post a Comment

Post a Comment (0)

Previous Post Next Post