||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶತಮಾನದ ಸಂಭ್ರಮದಲ್ಲಿ ಬಿಜೈ ಕಾಪಿಕಾಡ್ ಸರ್ಕಾರಿ ಶಾಲೆ

ಶತಮಾನದ ಸಂಭ್ರಮದಲ್ಲಿ ಬಿಜೈ ಕಾಪಿಕಾಡ್ ಸರ್ಕಾರಿ ಶಾಲೆ

 

ಮಂಗಳೂರು : ಕಳೆದ ನೂರು ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ಬಿಜೈ ಕಾಪಿಕಾಡು ಸರಕಾರಿ ಶಾಲೆಯು ಶತಮಾನದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇದೇ ಬರುವ 2022ರ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ನಡೆಸಲು ಹಳೆ ವಿದ್ಯಾರ್ಥಿಗಳ ಸಂಘದ ನೂತನ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.


ಈ  ವೇಳೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಪಾಠ ಕಲಿಸಿದ ನಿವೃತ್ತ ಶಿಕ್ಷಕ ಶಿಕ್ಷಕಿಯರನ್ನು ಹಾಗೂ ಪ್ರಸ್ತುತ ಇರುವ ಶಿಕ್ಷಕಿಯರನ್ನು ಗೌರವಿಸಲಾಗುವುದು. ಹಾಗೂ ಶಾಲೆಗೆ ಕೊಡುಗೆಗಳನ್ನು ನೀಡಿದವರನ್ನು ಸನ್ಮಾನಿಸಲಾಗುವುದು. ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ಹಿರಿಯ ಕಿರಿಯ ಹಳೆ ವಿದ್ಯಾರ್ಥಿಗಳೊಂದಿಗೆ ಸಹ ಭೋಜನ ಏರ್ಪಡಿಸಲಾಗಿದೆ.


ಇದೇ ಸಂದರ್ಭದಲ್ಲಿ ಶಾಶ್ವತ ನಿಧಿಯೊಂದನ್ನು ಸ್ಥಾಪಿಸಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮತ್ತು ಹೆಚ್ಚಿನ ಶಿಕ್ಷಕರನ್ನು ನೇಮಕಾತಿ ಮಾಡಲು ಸಮಿತಿಯಲ್ಲಿ ನಿರ್ಣಯಿಸಲಾಗಿದೆ. ಇದಕ್ಕಾಗಿ  ದೇಣಿಗೆಯನ್ನು ಚೆಕ್ ಅಥವಾ ಡಿ.ಡಿ. ಮೂಲಕ ಸಂಗ್ರಹಿಸಲಾಗುವುದು. ದೇಣಿಗೆಯನ್ನು ನೀಡಲು ಇಚ್ಚೆ ಇರುವವರು ಚೆಕ್ ಅಥವಾ ಡಿ.ಡಿ. ಮೂಲಕ ನೀಡಲು ಕೋರಲಾಗಿದೆ. ಅಥವಾ ಕಾಪಿಕಾಡು ಶಾಲೆಗೆ ಬಂದು ಮುಖ್ಯೋಪಾಧ್ಯಾಯನಿಯರಲ್ಲಿ ನೀಡಿ ರಸೀತಿ ಪಡೆದುಕೊಳ್ಳಬಹುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post