ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಅಭಿಯಾನ

Upayuktha
0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಸುಮಾರು 1400 ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು. ಲಸಿಕಾ ಅಭಿಯಾನ ಸಮಾರಂಭವನ್ನು ಪುತ್ತೂರಿನ ಮೆಡಿಕಲ್ ಆಫೀಸರ್ ಡಾ. ಸುಹೈಲಾ ದೀಪ ಬೆಳಗಿಸಿ ಉದ್ಘಾಟಿಸಿದರು.


ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕಾ ಅಭಿಯಾನದಲ್ಲಿ ಲಸಿಕೆಯನ್ನು ಪಡೆದುಕೊಳ್ಳುವುದರಿಂದ ತಮ್ಮ ಆರೋಗ್ಯದೊಂದಿಗೆ ಇತರರ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕೋವಿಡ್‍ಗೆ ಭಯಪಡುವ ಅಗತ್ಯ ಇಲ್ಲ. ವೈಯಕ್ತಿಕ ಸ್ವಚ್ಛತೆಯತ್ತ ಪ್ರತಿಯೊಬ್ಬರು ಗಮನ ಹರಿಸಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ಕೊರೊನಾ ರೂಪಾಂತರಿ ಓಮಿಕ್ರಾನ್ ಹರಡುವಿಕೆಯು ಮೂರನೇ ಅಲೆಯನ್ನು ಸೃಷ್ಠಿಸುವ ಸಂಭವ ಇರುವುದರಿಂದ ಜಾಗರೂಕರಾಗಿರಬೇಕು. ಪ್ರತಿಯೊಬ್ಬರು ಶುಚಿತ್ವಕ್ಕೆ ಮಹತ್ವ ನೀಡಬೇಕೆಂದು ಕರೆಕೊಟ್ಟರು. ಅಲ್ಲದೇ ಈ ಲಸಿಕಾ ಅಭಿಯಾನಕ್ಕೆ ಸಹಕರಿಸಿದ ಆಶಾ ಕಾರ್ಯಕರ್ತರಿಗೆ, ಆರೋಗ್ಯ ಕಾರ್ಯಕರ್ತರನ್ನು ಅಭಿನಂದಿಸಿದರು.  


ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಕೃಷ್ಣಪ್ರಸಾದ್ ನಡ್ಸಾರ್, ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಮುರಳಿ ಪಿ.ಜಿ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top