ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 27ಕ್ಕೆ

Upayuktha
0


 ಶ್ರೀ ಕ್ಷೇತ್ರದಲ್ಲಿ ನಡೆದ 49ನೇ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನವ ವಧೂವರರಿಗೆ ತಾಳಿ, ಉಡುಗೊರೆಗಳನ್ನು ನೀಡಿ ಆಶೀರ್ವದಿಸುತ್ತಿರುವ ಚಿತ್ರ.


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಿನಾಂಕ 27-04-2022, ಬುಧವಾರದಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.


ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.


ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,393 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.


ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 8147263422

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Advt Slider:
To Top