ನೈಟ್ ಕರ್ಫ್ಯೂ ಉಲ್ಲಂಘಿಸಿ ಲಾಕ್ಡೌನ್ ಸೃಷ್ಠಿಸಲು ಕಾರಣರಾಗಬೇಡಿ: ಸಿ.ಎಂ ಎಚ್ಚರಿಕೆ

Arpitha
0
ಬೆಳಗಾವಿ: ಕಳೆದ ಒಂದು ವಾರದಿಂದ ಕೊರೋನಾ, ಓಮಿಕ್ರಾನ್ ಕೇಸ್ ಹೆಚ್ಚುತ್ತಲೇ ಇದೆ‌. ಅದರಲ್ಲಿಯೂ ಮಹಾರಾಷ್ಟ್ರ, ಮುಂಬೈನಲ್ಲಿ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಮುಂಬೈ ಮತ್ತು ಕರ್ನಾಟಕದ ನಡುವಿನ ವಹಿವಾಟು ಜಾಸ್ತಿಯಿರುವ ಕಾರಣ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಅವರು ಭಾನುವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ " ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯದ ಜನತೆ  ನೈಟ್ ಕರ್ಫ್ಯೂ ಉಲ್ಲಂಘಿಸಿ ಬೇಜವಾಬ್ದಾರಿಯಿಂದ ವರ್ತಿಸುವುದು ಸರಿಯಲ್ಲ. ನೀವಾಗಿಯೇ ಲಾಕ್ಡೌನ್ ಆಯೋಜಿಸಲು ಕಾರಣರಾಗಬೇಡಿ" ಎಂದು ಹೇಳಿದರು.

ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆ ಪ್ರಯಾಣಿಸುವ ಪ್ರಯಾಣಿಕರ ಬಗ್ಗೆ ಗಮನಹರಿಸುವುದು ಅತೀ ಅಗತ್ಯವಾಗಿದೆ. ಜನರ ಆರೋಗ್ಯದ ದೃಷ್ಠಿಯಿಂದ ಇಂತಹ ಅನೇಕ ಕ್ರಮಗಳ ಅನುಷ್ಠಾನ ಅನಿವಾರ್ಯವಾಗಿದೆ" ಎಂದು ಅವರು ಹೇಳಿದರು. 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top