ವರ್ಷದ ವ್ಯಕ್ತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ, ಹರೇಕಳ ಹಾಜಬ್ಬ ಆಯ್ಕೆ

Arpitha
0
ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು  2021 ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಅಕ್ಷರ ಸಂತ ಹರೇಕಳ ಹಾಜಬ್ಬ ಆಯ್ಕೆಯಾಗಿದ್ದಾರೆ.

'ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ' ಪ್ರಶಸ್ತಿಗೆ ಈ ಬಾರಿ ಮಾಜಿ ಸಿಎಂ ಬಿಎಸ್ ವೈ ಹಾಗೂ ' ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ' ಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗೆ ಹಾಜಬ್ಬರವರು ಭಾಜನರಾಗಿರುವುದು ವಿಶೇಷವಾಗಿ ಕರಾವಳಿಗರಿಗೆ ಖುಷಿ ತಂದಿದೆ.

ಇನ್ನು ಕೊರೋನಾ ಸಂದರ್ಭದಲ್ಲಿ ಪ್ರತೀ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಉಳಿದಂತೆ ವಾರ್ಷಿಕ ಪ್ರಶಸ್ತಿಗೆ 16 ಹಿರಿಯ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top