ಕ್ಷೇತ್ರದ ಜೀರ್ಣೋದ್ಧಾರದೊಂದಿಗೆ ಸಮಾಜದ ಅಭಿವೃದ್ಧಿಯಾಗಲಿ: ಪೇಜಾವರಶ್ರೀ

Upayuktha
0

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಶಿಲಾನ್ಯಾಸ



ಮಂಗಳೂರು: ಊರಿನ ಅಭಿವೃದ್ಧಿಗೆ ಕ್ಷೇತ್ರ ಮಹತ್ವರ ಆಗಿದೆ. ಕ್ಷೇತ್ರಗಳು ಜೀರ್ಣೋದ್ಧಾರಗೊಂಡಾಗ ಸಮಾಜ ಅಭಿವೃದ್ಧಿ ಆಗುತ್ತದೆ. ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನ ದಕ್ಷಿಣ ಭಾರತದಲ್ಲೇ ಪ್ರಸಿದ್ಧ ಹೊಂದಿದೆ. ಇದರ ಬ್ರಹ್ಮಕಲಶ ನಿರ್ವಿಘ್ನವಾಗಿ ನಡೆಯಲಿ ಎಂದು ಉಡುಪಿ ಪೇಜಾವರ ಮಠಾದೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ನುಡಿದರು.


ಜ. 27ರಂದು ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಶಿಲಾನ್ಯಾಸವನ್ನು ನೆರವೇರಿಸಿ ಆಶೀರ್ವಚನ ನೀಡಿದರು.


ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಮಾತನಾಡುತ್ತಾ, ಜೀರ್ಣೋದ್ಧಾರದ ಕಾರ್ಯವು ಸರ್ವ ಭಕ್ತರ ಒಗ್ಗಟ್ಟು ಮತ್ತು ಸಹಕಾರದಿಂದ ನೆರವೆರಲಿ. ಧರ್ಮ ಕಾರ್ಯ ನಿರಂತರ ನಡೆಯುವಂತಾಗಲಿ ಎಂದು ನುಡಿದರು. ಒಡಿಯೂರು ಕ್ಷೇತ್ರದ ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡಿದರು.

ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946

ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಪುರುಷೋತ್ತಮ ಕುಲಾಲ್ ಕಲ್ಬಾವಿ, ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾ ರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ದಾಮೋಧರ್ ಎ. ಟ್ರಸ್ಟ್ ನ ಅಧ್ಯಕ್ಷರು ಪ್ರೇಮಾನಂದ ಕುಲಾಲ್, ಸೇವಾಸಮಿತಿ ಅಧ್ಯಕ್ಷರು ಸುಂದರ್ ಕುಲಾಲ್ ರವರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ನ್ಯಾ ರವೀಂದ್ರ ಮುನ್ನಿಪಾಡಿ ನಿರೂಪಿಸಿ ವಂದಿಸಿದರು. ಶಿಲಾನ್ಯಾಸದ ಧಾರ್ಮಿಕ ವಿಧಿ ವಿಧಾನಗಳು ಕ್ಷೇತ್ರದ ತಂತ್ರಿಗಳಾದ ಆನಂದ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಡೆದವು.  


ಕಾರ್ಯಕ್ರಮದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಮುಂಬಯಿ ಕುಲಾಲ ಸಂಘದ ಅಧ್ಯಕ್ಷ ದೇವದಾಸ್ ಕುಲಾಲ್ ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ ಚೆಂಡ್ಲಾ, ಮತ್ತು ಮಹಾರಾಷ್ಟ್ರ, ಬೆಂಗಳೂರು, ಕೇರಳ, ಮತ್ತಿತರ ರಾಜ್ಯಗಳಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top