ಉಜಿರೆ: ಶ್ರೀಧ.ಮ ಕಾಲೇಜಿನ ಆಶ್ರಯದಲ್ಲಿ ಬರುವ ಜನವರಿ 10 ಹಾಗೂ 11 ರಂದು ಎರಡು ದಿನಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಹ್ಯಾಂಡ್‌ಬಾಲ್ ಪಂದ್ಯಾವಳಿ ನಡೆಯಲಿದೆ.
ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಾಟವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎನ್. ಉದಯಚಂದ್ರ ಉದ್ಘಾಟಿಸಲಿದ್ದು, ಶ್ರೀ ಧ.ಮ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಅತಿಥಿಯಾಗಿ ಪಾಲ್ಗೊಳ್ಳುವರು.
ಜನವರಿ 11 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗೆರಾಲ್ಡ್ ಸಂತೋಷ್ ಡಿ'ಸೋಜಾ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಸಂಘಟಕರು ತಿಳಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ