ಮಂಗಳೂರು: ಸ್ವಾಮಿ ವಿವೇಕಾನಂದರ 160ನೇ ಜನ್ಮದಿನವನ್ನು ಮಂಗಳೂರಿನ ಶ್ರೀರಾಮಕೃಷ್ಣ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಜಂಟಿ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನವನ್ನಾಗಿ ಬುಧವಾರ ಆನ್‌ಲೈನ್ ವೇದಿಕೆ ಝೂಮ್ ಮೂಲಕ ಆಚರಿಸಲಾಯಿತು.
ಐಪಿಎಸ್ ಅಧಿಕಾರಿ, ಬೆಂಗಳೂರಿನ ಸಿಐಡಿ ವಿಭಾಗದ ಅಧೀಕ್ಷಕ ರವಿ. ಡಿ. ಚನ್ನಣ್ಣವರ್ ಅವರು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರು ಮುಖ್ಯ ಅತಿಥಿಯಾಗಿದ್ದರು. ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಗೌರವ ಉಪಸ್ಥಿತರಿದ್ದು, ರಾಷ್ಟ್ರಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕಿ ಪ್ರಶಸ್ತಿ ಪಡೆದ ಬಿಂದಿಯಾ ಎಲ್.ಶೆಟ್ಟಿ ವಿಶೇಷ ಆಹ್ವಾನಿತರಾಗಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ