ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪರಾಕ್ರಮ್ ದಿವಸ್ ಆಚರಣೆ

Upayuktha
0

ಪುತ್ತೂರು: 'ಸ್ವಾತಂತ್ರ್ಯ ನಮ್ಮ ಹಕ್ಕು ಭಿಕ್ಷೆಯಲ್ಲ, ಅದನ್ನು ನಾವು ನಮ್ಮ ಶಕ್ತಿಯಿಂದಲೇ ಪಡೆದುಕೊಳ್ಳಬೇಕು' ಎಂಬುದಾಗಿ ಘೋಷಿಸಿ ತನ್ನ ಅಸಾಧಾರಣ ಸಾಮರ್ಥ್ಯದಿಂದ ಆಜಾದ್ ಹಿಂದ್ ಫೌಜ್ ಎಂಬ ಸೈನ್ಯವನ್ನು ಕಟ್ಟಿ ಬ್ರಿಟೀಷರ ವಿರುದ್ಧ ಹೋರಾಡಿದ ಮಹಾಚೇತನ ನೇತಾಜಿ ಸುಭಾಷ್‌ಚಂದ್ರ ಭೋಸ್. ಇಂತಹ ವೀರ ನಾಯಕರು, ಆದರ್ಶ ನಾಯಕರು, ಅವರ ಹೋರಾಟ, ದೇಶಪ್ರೇಮ ನಮಗೆಂದಿಗೂ ಅನುಕರಣೀಯ ಹಾಗೂ ಅವಿಸ್ಮರಣೀಯ ಎಂದು ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ಪ್ರಾಧ್ಯಾಪಕರಾದ ಖ್ಯಾತ ವಾಗ್ಮಿಗಳೂ ಆದ ಚಂದ್ರಕಾಂತ ಗೋರೆ ಹೇಳಿದರು.


ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನಡೆದ ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್‌ಚಂದ್ರ ಬೋಸ್‌ರ 125ನೇ ಜನ್ಮ ದಿನಾಚರಣೆ ಪರಾಕ್ರಮ್ ದಿವಸ್ ಕಾರ್ಯಕ್ರಮದಲ್ಲಿ ನೇತಾಜಿಯವರ ಸಾಧನೆಯ ವೈಶಿಷ್ಟ್ಯಗಳನ್ನು, ಅವರ ದೇಶಪ್ರೇಮ, ಜೀವನದ ಆದರ್ಶಗಳ ಆಳವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.


ನೇತಾಜಿ ಸುಭಾಷ್‌ಚಂದ್ರ ಬೋಸರು ದೇಶ ಕಂಡ ಅಪ್ರತಿಮ ನಾಯಕರು. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯಿರಿ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಇದರ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ವಿದ್ಯಾರ್ಥಿನಿಯರಾದ ಅನಘ ಮತ್ತು ಶರಧಿ ಪ್ರಾರ್ಥಿಸಿದರು. ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರು ಸ್ವಾಗತಿಸಿದರು. ವಿದ್ಯಾರ್ಥಿ ಅಭಿಲಾಶ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top