ಕಾರಿಂಜೇಶ್ವರದ ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ: ಗಣಿ ಸಚಿವ ಹಾಲಪ್ಪ ಆಚಾರ್‌ಗೆ ಪೇಜಾವರ ಶ್ರೀ ಅಹವಾಲು

Upayuktha
0


ಉಡುಪಿ- ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮಂತ್ರಿ ಹಾಲಪ್ಪ ಆಚಾರ್ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.‌


ಈ ಸಂದರ್ಭ, ದಕ ಜಿಲ್ಲೆಯ ಪ್ರಾಚೀನ ತೀರ್ಥ ಕ್ಷೇತ್ರ ನರಹರಿ ಪರ್ವತದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ವಿವರಿಸಿ  ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಲಿಖಿತ ಅಪೇಕ್ಷೆ ಸಲ್ಲಿಸಿದರು. 

  ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 

ಸ್ಪಂದಿಸಿದ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ವಿಚಾರ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ರಾಮ್ ಮನೋಹರ್ ಪ್ರಸಾದ್, ಸಚಿವರ ಆಪ್ತ ಕಾರ್ಯದರ್ಶಿ ಡಾ ನಂದನ್ ಕುಮಾರ್ ಉಪಸ್ಥಿತರಿದ್ದರು.‌


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top