ಮೇಕೆದಾಟು ಅಲ್ಲ ಕುರ್ಚಿಗಾಗಿ ಹೋರಾಟ: ಸಂಜೀವ ಮಠಂದೂರು

Upayuktha
0

  

ಪುತ್ತೂರು: ರಾಜ್ಯದ ಜನತೆಯ ಅರೋಗ್ಯದ  ಜತೆ ಚೆಲ್ಲಾಟದ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಮೇಕೆದಾಟು ಮುಖ್ಯವಾಗಿರದೆ ಕುರ್ಚಿಯ ಕನಸೇ ಮುಖ್ಯವಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.


ಕಾಂಗ್ರೆಸ್ ಪಕ್ಷ ಮೇಕೆದಾಟು ವಿಚಾರದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಇದು ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು, ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂದವಿಲ್ಲ ಎಂದು ವ್ಯಂಗ್ಯವಾಡಿದರು.


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆ ಗೆಲ್ಲೋದು ಹೇಗೆ, ಗೆದ್ದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಉದ್ದೇಶವಿಟ್ಟುಕೊಂಡು ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಿತಾಸಕ್ತಿಯೇ ಮುಖ್ಯವಾಗಿದ್ದು, ರಾಜ್ಯದ ಜನತೆಯ ಹಿತಾಸಕ್ತಿ ಕಿಂಚಿತ್ತೂ ಇಲ್ಲ ಎಂದ ಅವರು‌ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಕಾಂಗ್ರೇಸ್ ಪಾದಯಾತ್ರೆ ಮಾಡುವ ಮೂಲಕ ಕೊರೊನಾ ಹರಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top