ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಅರಿವು ಜಾಗೃತಿ ಕಾರ್ಯಕ್ರಮ

Upayuktha
0

 

ಪುತ್ತೂರು: ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಆಕೆಯ ರಕ್ಷಣೆಗಾಗಿ ಇರುವ ಹಕ್ಕುಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ವಿಶೇಷ ಸಾಧನೆಗೈಯಬೇಕು ಎಂದು ವಿವೇಕಾನಂದ ಸ್ನಾತಕೋತ್ತರ ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜಕಿ ಡಾ| ವಿಜಯ ಸರಸ್ವತಿ ಹೇಳಿದರು.


ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಆಯೋಜಿಸಲಾದ ಸಾಮಾಜಿಕ ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.


ವಿದ್ಯಾರ್ಥಿನಿಯರು ಭೌದ್ದಿಕವಾಗಿ ಹೆಚ್ಚು ಸಬಲರು. ಹದಿಹರೆಯದಲ್ಲಿ ಉಂಟಾಗುವ ಮಾನಸಿಕ ತಳಮಳಗಳನ್ನು ಆಪ್ತ ಸಮಲೋಚನೆಯ ಮೂಲಕ ಬಗೆಹರಿಸಿಕೊಳ್ಳಬೇಕು. ತಮ್ಮ ಜವಾಬ್ದಾರಿಗಳನ್ನು ತಿಳಿದುಕೊಂಡು ಶಿಸ್ತು ಬದ್ದವಾಗಿ ಕಾರ್ಯ ನಿರ್ವಹಿಸಿದರೆ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬಹುದು ಎಂದು ಅಭಿಪ್ರಾಯಪಟ್ಟರು.


ವಿದ್ಯಾರ್ಥಿನಿಯರಾದ ದೀಕ್ಷಾ, ದೇವಿಕಾ ಮತ್ತು ಸನ್ಮಯ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಹಾಡಿದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಯಶವಂತಿ ಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ದಯಾಮಣಿ ಸ್ವಾಗತಿಸಿ ವಿದ್ಯಾರ್ಥಿನಿ ಧರಿತ್ರಿ ವಂದಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top