ಮೂಡಬಿದಿರೆ: 81ನೇ ಅಖಿಲ ಭಾರತ ಅಂತರ್ ವಿವಿ ಪುರುಷರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ 'ವಿಕಾಸ'ವನ್ನು ಬಿಡುಗಡೆಗೊಳಿಸಲಾಯಿತು.
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಈ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭ ಹೊಸದಿಗಂತ ಪತ್ರಿಕೆಯ ವರದಿಗಾರ ಐ.ಬಿ.ಸಂದೀಪ್ ಕುಮಾರ್ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಿವಿಧ ಪತ್ರಿಕೆಗಳ ವರದಿಗಾರರು, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ