ಬಿದಿರು ಕೃಷಿಗೆ ಸಹಾಯಧನ: ಅರ್ಜಿ ಆಹ್ವಾನ

Upayuktha
0

 

ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ವರ್ಗದ ಜಮೀನು ಹೊಂದಿರುವ ರೈತರಿಗೆ ಬಿದಿರು ಕೃಷಿ ಮಾಡಲು, ಪ್ರತೀ ಎಕರೆಗೆ ಪ್ರತೀ ವರ್ಷ 18000 ರೂ. ನಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top