||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಘೋಷಣೆ

ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಘೋಷಣೆ


ಹಾಲಿ ಪರ್ಯಾಯ ಶ್ರೀಗಳಾದ ಅದಮಾರು ಶ್ರೀಗಳಿಂದ ಸೋಮವಾರ ಮಧ್ಯಾಹ್ನದ ಪೂಜೆ. ಇಂದು ಮಧ್ಯರಾತ್ರಿಯ ಬಳಿಕ ನಾಳೆ ಬೆಳಗಿನ ಜಾವದಲ್ಲಿ ಕೃಷ್ಣಾಪುರ ಮಠದ ಶ್ರೀಗಳಿಗೆ ಶ್ರೀಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರವಾಗಲಿದೆ.


ಉಡುಪಿ: ಬಹುನಿರೀಕ್ಷೆಯ ಧಾರ್ಮಿಕ ಉತ್ಸವ ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ. 


ಸಮಿತಿ ಗೌರವಾಧ್ಯಕ್ಷ ಕೆ ಸೂರ್ಯನಾರಾಯಣ ಉಪಾಧ್ಯಾಯರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಶನಿವಾರ ರಾತ್ರಿ ನಡೆದ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ಮಹತ್ವದ ತೀರ್ಮಾನ‌ ಕೈಗೊಳ್ಳಲಾಗಿದೆ.


ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣವಾಗಿ ಸಹಕರಿಸಬೇಕೆನ್ನುವ ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಶ್ರೀಪಾದರ ಆಶಯದಂತೆ ಜನವರಿ 17ರ ನಡುರಾತ್ರಿ ನಡೆಯಲಿರುವ (18 ರ ನಸುಕಿನ ವೇಳೆ) ನಡೆಯಲಿರುವ ಬಹುನಿರೀಕ್ಷೆಯ ಪರ್ಯಾಯೋತ್ಸವ ಮೆರವಣಿಗೆ ಮತ್ತು ನಂತರ ರಾಜಾಂಗಣದಲ್ಲಿ ನಡೆಯಲಿರುವ ಪರ್ಯಾಯ ದರ್ಬಾರ್ ಸಭೆಯನ್ನು ತೀರಾ ಸಾಂಪ್ರದಾಯಿಕತೆಗೆ ಆದ್ಯತೆ ನೀಡಿ ತೀರಾ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ.


ಈ ಕಾರ್ಯಕ್ರಮಗಳನ್ನು ವಿವಿಧ ಟಿ ವಿ ವಾಹಿನಿಗಳಲ್ಲಿ ನೇರಪ್ರಸಾರ ಮಾಡಲಾಗುವುದು ಆದ್ದರಿಂದ ಭಕ್ತಾದಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ಸಹಕರಿಸಬೇಕೆಂದು ಭಕ್ತರು ಮತ್ತು ನಾಗರಿಕರಲ್ಲಿ ನಮ್ರರಾಗಿ ವಿನಂತಿಸುವುದಾಗಿ ರಘುಪತಿ ಭಟ್ ತಿಳಿಸಿದ್ದಾರೆ.


ಆ ಹಿನ್ನೆಲೆಯಲ್ಲಿ ಪರ್ಯಾಯೋತ್ಸವ ಮೆರವಣಿಗೆಯಲ್ಲಿ ಉತ್ಸವ ಸಮಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಿದ್ಧಪಡಿಸಲಾಗಿದ್ದ ಜಾನಪದ ತಂಡಗಳನ್ನು ಮತ್ತು ಕೆಲವು ಟ್ಯಾಬ್ಲೋಗಳನ್ನು ರದ್ದುಪಡಿಸಿದ್ದೇವೆ. ಅಷ್ಟ ಮಠಾಧೀಶರು ಕುಳಿತುಕೊಳ್ಳುವ ಮೇನೆಯನ್ನು ಹೊತ್ತ ವಾಹನಗಳು, ವಾದ್ಯ ಚಂಡೆ, ಡೋಲು, ಬಿರುದಾವಳಿ ಮತ್ತು ಕೇವಲ ಪೌರಾಣಿಕ ದೃಶ್ಯಾವಳಿಗಳನ್ನೊಳಗೊಂಡ ಟ್ಯಾಬ್ಲೋಗಳು ಮಾತ್ರ ಮೆರಣಿಗೆಯಲ್ಲಿ ಇರುತ್ತವೆ. ಪರ್ಯಾಯ ದರ್ಬಾರ್ ಸಭೆಯಲ್ಲೂ ಸೀಮಿತ ಸಂಖ್ಯೆಯ ಆಸನ ವ್ಯವಸ್ಥೆ ಇರುತ್ತವೆ. ಇವುಗಳನ್ನು ಜನತೆ ಅಗತ್ಯವಾಗಿ ಗಮನಿಸಬೇಕು.


ಎರಡು ಕೋವಿಡ್ ಲಸಿಕೆಗಳನ್ನು ಪಡೆದವರಿಗೆ ಮಾತ್ರ ಉತ್ಸವದಲ್ಲಿ ಭಾಗವಹಿಸಲು ಆದ್ಯತೆ ನೀಡಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ಬು ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ಜಿಲ್ಲಾಡಳಿತದೊಂದಿಗೆ ಪೂರ್ಣ ಸಹಕರಿಸಲಿದ್ದು ಜನತೆಯೂ ಸಹಕರಿಸುವಂತೆ ಮತ್ತೊಮ್ಮೆ ವಿನಂತಿಸುತ್ತೇವೆ ಎಂದು ಭಟ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post