||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬಿಕಾ ಪದವಿ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ

ಅಂಬಿಕಾ ಪದವಿ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ

ರಾಷ್ಟ್ರಭಿಮಾನದ ಕೊರತೆಯಿಂದ ಸಮಾಜ ಭ್ರಷ್ಟವಾಗುತ್ತಿದೆ: ಆದರ್ಶ ಗೋಖಲೆ


ಪುತ್ತೂರು: ರಾಷ್ಟ್ರಭಿಮಾನದ ಕೊರತೆಯಿಂದ ಸಮಾಜ ಭ್ರಷ್ಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಭಾರತೀಯತೆಯ ಬೇರನ್ನು ಅರಿತು, ವೇದಸಾರವನ್ನು ಉಣಬಡಿಸಿದ ವಿವೇಕಾನಂದರ ತತ್ವಗಳನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸುವುದು ಮುಖ್ಯವಾಗಿದೆ. ನಮ್ಮ ಮನಸ್ಸನ್ನು ತೆರೆದು ಹೊಸ ವಿಚಾರಗಳ ಬೆಳಕನ್ನು ಆಹ್ವಾನಿಸಿ, ಆ ಬೆಳಕಿನಲ್ಲಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಾರ್ಕಳದ ವಾಗ್ಮಿ ಆದರ್ಶ ಗೋಖಲೆ ಹೇಳಿದರು.


ಅವರು ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಬುಧವಾರ ಮಾತನಾಡಿದರು.


ಬದುಕನ್ನು ಬದಲಿಸಲು, ಹೊಸತನವನ್ನು ಆಹ್ವಾನಿಸಲು, ಸಮೃದ್ಧ ಬದುಕನ್ನು ಕಟ್ಟಿಕೊಳ್ಳಲು ವಿವೇಕಾನಂದರು ಪ್ರೇರಣೆಯಾಗಿದ್ದಾರೆ. ವೈಜ್ಞಾನಿಕವಾದ ಹಾಗೂ ಆಧ್ಯಾತ್ಮಿಕವಾದ ದೃಷ್ಟಿಕೋನಗಳಲ್ಲಿ ತಮ್ಮ ತತ್ತ್ವಗಳನ್ನು ಪ್ರಪಂಚದಾದ್ಯಂತ ಹರಡಿದ ಕೀರ್ತಿ ವಿವೇಕಾನಂದರದ್ದು. ಹಾಗೇಯೇ, ಜೀವನದ ಪ್ರತಿ ಸಮಸ್ಯೆಗೂ ವಿವೇಕಾನಂದರು ಪರಿಹಾರವನ್ನು ನೀಡಿದ್ದಾರೆ ಹಾಗೂ ಪ್ರತಿಯೊಬ್ಬ ಯಶಸ್ವಿ ವ್ಯಕ್ತಿಯ ಹಿಂದೆ ವಿವೇಕ ಚಿಂತನೆಗಳಿರುತ್ತದೆ ಎಂದರಲ್ಲದೆ ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಂಡವರು ದೇಶದ ಬಗೆಗೆ ಅಭಿಮಾನ, ಪ್ರೇಮಗಳನ್ನು ಹೊಂದಿರದಿರಲು ಸಾಧ್ಯವೇ ಇಲ್ಲ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಿವೇಕಾನಂದರ ಚಿಂತನೆಗಳ ಸಾವಿರದ ಒಂದು ಪಾಲಾದರೂ ಜೀವನದಲ್ಲಿ ಅಳವಡಿಸಬೇಕು. ಅವರ ಅನುಯಾಯಿಗಳಾಗಿ, ವಿವೇಕತತ್ತ್ವಗಳನ್ನು ಮತ್ತಷ್ಟು ಹರಡಿಸಲು ಪ್ರಪಂಚಾದ್ಯಂತ ಭಾರತೀಯ ಸಾಂಸ್ಕೃತಿಕ ಆಕ್ರಮಣ ನಡೆಯಬೇಕು. ಆಯುಷ್ಯ, ಜೀವನವನ್ನು ದೇಶಕ್ಕೋಸ್ಕರ ಮುಡಿಪಾಗಿಟ್ಟಿರಬೇಕು ಎಂದರು.


ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್ಟ, ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ, ಯೋಗಶಿಕ್ಷಕಿ ಶರಾವತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಲೇಖಾ ಕಾರ್ಯಕ್ರಮ ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post