ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 2021ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.
ಕಳೆದ ನವೆಂಬರ್‌ನಲ್ಲಿ ನಡೆದ ಸ್ನಾತಕೋತ್ತರ ವಿಭಾಗದ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಶೇ.100 ಫಲಿತಾಂಶ ಸಾಧಿಸಿ ಅಮೋಘ ಸಾಧನೆಯನ್ನು ಮೆರೆದಿದೆ. ಒಟ್ಟು 39 ವಿದ್ಯಾರ್ಥಿಗಳಲ್ಲಿ 31 ಮಂದಿ ಪ್ರಥಮ ದರ್ಜೆ ಹಾಗೂ 08 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಅಲ್ಲದೆ ಕಳೆದ ಜುಲೈ ತಿಂಗಳಲ್ಲಿ ನಡೆದ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲೂ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆಯನ್ನು ಮೆರೆದಿದ್ದಾರೆ. ವಿದ್ಯಾರ್ಥಿಗಳಾದ ಸಾಯಿಚಿನ್ಮಯಿ ಹಾಗೂ ಪೂಜಾ ಬಿ.ಜಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಕ್ರಮವಾಗಿ ರಾಜ್ಯಕ್ಕೆ ಮೊದಲ ಹಾಗೂ ಎರಡನೇ ರ‍್ಯಾಂಕ್ ಪಡೆದಿರುತ್ತಾರೆ. ಸಾಯಿ ಚಿನ್ಮಯಿ ಸಮಗ್ರ ಬಿ.ಎ.ಎಂಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಕಾಲೇಜಿನ ಪ್ರಾಚಾರ್ಯ ಡಾ ಸಜಿತ್ ಎಂ ಶ್ಲಾಘಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ