ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, 2021 ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು-2021 ಬಹುಮಾನವನ್ನು ನೀಡಲಾಗುವುದು.
ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅಥವಾ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ, ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಫೆಬ್ರವರಿ 10 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು, ವೆಬ್‌ಸೈಟ್ www.kannadapustakapradhikara.com ಅಥವಾ ದೂರವಾಣಿ ಸಂಖ್ಯೆ: 080-22484516 / 22107704 ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ