||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತುಳು ಅಕಾಡೆಮಿ 2021ರ ಸಾಲಿನ 'ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ'ಕ್ಕೆ ಅರ್ಜಿ ಆಹ್ವಾನ

ತುಳು ಅಕಾಡೆಮಿ 2021ರ ಸಾಲಿನ 'ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ'ಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.


ಗೌರವ ಪ್ರಶಸ್ತಿ 2021:


ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. (1). ತುಳು ಭಾಷೆ, ಸಾಹಿತ್ಯ ಸಂಶೋಧನೆಗಳ ಕ್ಷೇತ್ರದಲ್ಲಿ ಗಣನೀಯ ಸೇವೆ (2). ತುಳು ನಾಟಕ - ಚಲನಚಿತ್ರ ಕ್ಷೇತ್ರದಲ್ಲಿ ಸಾಹಿತಿಯಾಗಿ ಅಥವಾ ಕಲಾವಿದನಾಗಿ ಗಣನೀಯ ಸೇವೆ (3). ತುಳು ಜಾನಪದ ಕ್ಷೇತ್ರದಲ್ಲಿ (ಜಾನಪದ ಕುಣಿತ, ಪಾಡ್ದನ, ದೈವನರ್ತನ) ಗಣನೀಯ ಸೇವೆ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ 3 ಜನ ಗಣ್ಯರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.


ಈ ಸಂದರ್ಭದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಬಾಲ ಪ್ರತಿಭೆ, ಯುವ ಸಾಧಕ, ಸಂಘಟನೆ (ಬಿರ್ಸೆ ಬಾಲೆ ತಮ್ಮನ, ಬಿರ್ಸೆ ಜವನೆರೆ ತಮ್ಮನ, ಬಿರ್ಸೆ ಕೂಟ ತಮ್ಮನ) ಇವರುಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ. ಅರ್ಜಿಗಳನ್ನು ಸ್ವತ: ಅಭ್ಯರ್ಥಿಗಳೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿ ಸಲ್ಲಿಸಬಹುದು. ಹಿಂದಿನ ಸಾಲಿನಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ, ಆಯ್ಕೆ ಆಗದ ಮಹನೀಯರ ಅರ್ಜಿಗಳನ್ನು ಈ ವರ್ಷವೂ ಪರಿಗಣಿಸಲಾಗುವುದು. ಅವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಆದರೆ ಸಾಧನೆಯ ಪೂರಕ ವಿವರಗಳಿದ್ದಲ್ಲಿ ಕಳುಹಿಸಿಕೊಡಬಹುದು. ಹೊಸದಾಗಿ ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಗಳನ್ನು ಕಳುಹಿಸಬೇಕು. ಅರ್ಜಿಯನ್ನು ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಗಳೊಂದಿಗೆ ಅಕಾಡೆಮಿಗೆ ಕಳುಹಿಸಿ ಕೊಡಬಹುದು.


ಪುಸ್ತಕ ಬಹುಮಾನ 2021:


2021ರ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 01-01-2021 ರಿಂದ 31-12-2021 ರವರೆಗೆ ಪ್ರಕಟಗೊಂಡ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಪರಿಗಣಿಸಲು ಅವಕಾಶವಿರುತ್ತದೆ. ವಿಭಾಗ -1 ತುಳು ಕವನ ಸಂಕಲನ, ವಿಭಾಗ -2 ತುಳು ಕಥಾ ಸಂಕಲನ, ವಿಭಾಗ -3 ತುಳು ಕಾದಂಬರಿ, ವಿಭಾಗ -4 ತುಳು ಕಾವ್ಯ, ವಿಭಾಗ -5 ತುಳು ನಾಟಕ, ವಿಭಾಗ -6 ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ವಿಭಾಗ -7 ತುಳುವಿನಿಂದ ಇತರ ಭಾಷೆಗೆ - ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಆಹ್ವಾನಿಸಲಾಗಿದೆ.


ಈ 7 ವಿಭಾಗಗಳಲ್ಲೂ ಕನಿಷ್ಠ 3 ಪುಸ್ತಕಗಳು ಬಂದಲ್ಲಿ ಮಾತ್ರ ಅಕಾಡೆಮಿಯ ನಿಯಮಾವಳಿಯಂತೆ 1 ಪುಸ್ತಕವನ್ನು ಆಯ್ಕೆ ಮಾಡಲಾಗುವುದು. ಪ್ರತಿ ಪ್ರಕಾರಗಳಲ್ಲಿ ಮೂರಕ್ಕಿಂತ ಕಡಿಮೆ ಪುಸ್ತಕಗಳು ಸ್ವೀಕೃತವಾದಲ್ಲಿ, ಮೌಲ್ಯಯುತ ಪುಸ್ತಕಗಳಾಗಿದ್ದರೂ ಸಹ ಅಕಾಡೆಮಿ ನಿಯಮಾವಳಿಯಂತೆ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗುವುದಿಲ್ಲ. ಅಕಾಡೆಮಿಯು ಹೆಚ್ಚು ಸಂಖ್ಯೆಯಲ್ಲಿ ಸ್ವೀಕರಿಸುವ ಪುಸ್ತಕಗಳ 3 ಪ್ರಕಾರಗಳನ್ನು ಮಾತ್ರ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ 4 ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.


ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ "ತುಳು ಅಕಾಡೆಮಿ ಗೌರವ ಪ್ರಶಸ್ತಿ -2021" ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ "ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ - 2021" ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟಾçರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳುಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು - 575 006 ಈ ವಿಳಾಸಕ್ಕೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ: 7411572115 ಸಂಪರ್ಕಿಸಬಹುದು, ದಿನಾಂಕ: 31-01-2022 ರೊಳಗೆ ಸಲ್ಲಿಸುವಂತೆ ಅಕಾಡೆಮಿ ಅಧ್ಯಕ್ಷ, ದಯಾನಂದ ಜಿ. ಕತ್ತಲ್‌ಸಾರ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post