ವಾರಾಂತ್ಯ ಕರ್ಫ್ಯೂ ಹಿನ್ನಲೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸೇವೆಗಳು ರದ್ದು

Chandrashekhara Kulamarva
0

ಧರ್ಮಸ್ಥಳ: ಕೋವಿಡ್- 19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ.


ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇತರ ದಿನಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮಾಹಿತಿ ನೀಡಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top