ಬೆಳ್ಳಾರೆ: ಜ.13ರಂದು ಇನ್‌ಫೋಸಿಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಬೆಳ್ಳಾರೆ ಘಟಕಕ್ಕೆ ಕಂಪ್ಯೂಟರ್‌ನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರು ಬೆಳ್ಳಾರೆ ಘಟಕದ ಪ್ರಭಾರ ಘಟಕಾಧಿಕಾರಿಯಾದ ಪಿ ವಸಂತ ಇವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್, ಕಛೇರಿ ಅಧೀಕ್ಷಕರಾದ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ. ಎಸ್, ಮೀನಾಕ್ಷಿ ಹಾಗೂ ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಹರೀಶ್ಚಂದ್ರ, ಜಯಂತ, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್, ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಲೋಕೇಶ್, ಗೃಹರಕ್ಷಕರಾದ ಸುನೀಲ್ ಕುಮಾರ್ (ಸಾರ್ಜೆಂಟ್), ದಿವಾಕರ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ