||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬಿಕಾ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಉದ್ಘಾಟನೆ

ಅಂಬಿಕಾ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಉದ್ಘಾಟನೆ

 

ಮನುಷ್ಯನಲ್ಲಿ ಉದಾತ್ತ ಗುಣಗಳಿರಬೇಕಾದದ್ದು ಅತ್ಯಂತ ಅಗತ್ಯ: ಪ್ರೊ.ವಾಸುದೇವ ರಾವ್


ಪುತ್ತೂರು: ಎನ್.ಎಸ್.ಎಸ್ ಘಟಕವು ಯುವಜನರನ್ನು ಬಲಗೊಳಿಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸಮಾಜಸೇವೆ ಮತ್ತು ರಾಷ್ಟ್ರಸೇವೆಯನ್ನು ಮಾಡಲು ಪ್ರೇರೇಪಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಮೂಡಿಸುವುದರ ಜೊತೆ ಜೊತೆಗೆ ಶಿಕ್ಷಣವನ್ನು ನೀಡುತ್ತದೆ. ಎನ್.ಎಸ್.ಎಸ್‌ನಲ್ಲಿ ತೊಡಗುವುದರಿಂದ ದೊರಕುವ ಆನಂದ ಹಾಗೂ ಅನುಭವ ಅಪಾರವಾದದ್ದು ಎಂದು ಗೇರುಕಟ್ಟೆಯ ವಿಶ್ರಾಂತ ಪ್ರಾಧ್ಯಾಪಕ ವಾಸುದೇವ ರಾವ್ ಹೇಳಿದರು.


ಅವರು ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಬುಧವಾರದಂದು ಕಾಲೇಜಿನ ಎನ್.ಎಸ್.ಎಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.


ಪ್ರೀತಿ, ತ್ಯಾಗ, ಶಾಂತಿ, ಸಹಬಾಳ್ವೆ, ಬಂಧುತ್ವ ಮುಂತಾದ ಉದಾತ್ತ ಗುಣಗಳನ್ನು ಮನುಷ್ಯನು ಹೊಂದಿರಬೇಕು. ಮಮತೆ ಮತ್ತು ಮಾನವತೆಯನ್ನು ಬೆಳೆಸಿಕೊಳ್ಳಬೇಕು. ಸ್ವಚ್ಛತೆ, ನೈರ್ಮಲ್ಯತೆ, ಶಿಸ್ತನ್ನು ಜೀವನದಲ್ಲಿ ಅಳವಡಿಸಬೇಕು. ಶ್ಲೋಕವೊಂದರಲ್ಲಿ ಹೇಳಿರುವಂತೆ ಜನನಿ ಮತ್ತು ಜನ್ಮಭೂಮಿಯ ಸೇವೆಯನ್ನು ಮಾಡಬೇಕು. ಅವುಗಳು ಎಲ್ಲದಕ್ಕಿಂತ ಮಿಗಿಲಾದದ್ದು. ಇಂತಹ ಭಾವನೆಯನ್ನು ಮೂಡಿಸುವಲ್ಲಿ ಎನ್.ಎಸ್.ಎಸ್ ಸಹಕಾರಿಯಾಗಿದೆ ಎಂದರಲ್ಲದೆ ಸಮಾಜ ಸೇವೆ ಮಾಡುವುದರಿಂದ ಯಾವುದೇ ರೀತಿಯ ಶುಲ್ಕ ದೊರಕುವುದಿಲ್ಲ. ಬದಲಾಗಿ ಜ್ಞಾನ ಹಾಗೂ ಸಂತೃಪ್ತಿ ದೊರಕುತ್ತದೆ ಎಂದರು.


ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಸಂಯೋಜಕಿ ಡಾ.ನಾಗರತ್ನ ಕೆ.ಎ ಮಾತನಾಡಿ, ಎನ್.ಎಸ್.ಎಸ್ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಅರಳಿಸುತ್ತದೆ ಮತ್ತು ಚಾರಿತ್ರ‍್ಯವನ್ನು ಬೆಳೆಸುತ್ತದೆ. ಸದ್ಗುಣಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಎನ್.ಎಸ್.ಎಸ್ ನ ಪಾತ್ರ ಅತಿ ಮುಖ್ಯವಾದುದು. ಸಿಗುವ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು ಎಂದರಲ್ಲದೆ ಎನ್.ಎಸ್.ಎಸ್‌ ನ ಯೋಜನೆ, ಗುರಿ, ರೂಪುರೇಷಗಳನ್ನು ವಿಸ್ತಾರವಾಗಿ ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ವ್ಯಕ್ತಿತ್ವವನ್ನು ಅರಳಿಸುವ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ನಮಗಾಗಿ ಬದುಕದೆ ಇತರರಿಗಾಗಿ, ಸಮಾಜ ಕಾರ್ಯಕ್ಕಾಗಿ ಜೀವನವನ್ನು ಮೀಸಲಿಡಬೇಕು. ಸಮಾಜ ಗುರುತಿಸುವಂಥ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಆಗ ಜೀವನ ಸಾರ್ಥಕ್ಯವನ್ನು ಪಡೆಯುತ್ತದೆ ಎಂದರು.


ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಾಸುದೇವ್ ರಾವ್ ಅವರನ್ನು ಸನ್ಮಾನಿಸಲಾಯಿತು. ಅಂಬಿಕಾ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಳ್ಳುವುದಕ್ಕಾಗಿ ಪ್ರೊ.ವಾಸುದೇವ ರಾವ್ ಅವರು ಐದು ಸಾವಿರ ರೂಪಾಯಿಗಳ ಕೊಡುಗೆಯನ್ನು ಹಸ್ತಾಂತರಿಸಿದರು.


ಕಾಲೇಜಿನ ವಿದ್ಯಾರ್ಥಿಗಳಾದ ಪಂಚಮಿ, ಅಂಕಿತಾ, ಸ್ಪೂರ್ತಿ ಪ್ರಾರ್ಥಿಸಿದರು. ಕಾಲೇಜಿನ ಎನ್.ಎಸ್.ಎಸ್ ಘಟಕದ ಸಂಯೋಜಕ ನವೀನ್.ಎಸ್ ಸ್ವಾಗತಿಸಿ, ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಪ್ರಸ್ತಾಪವನೆಗೈದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿ, ಕನ್ನಡ ವಿಭಾಗದ ಪ್ರಾದ್ಯಾಪಕ ಗಿರೀಶ್ ಭಟ್ ಇಳಂತಿಲ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post