||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಗೆ ಚಾಲನೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಗೆ ಚಾಲನೆ

ಪುತ್ತೂರು: ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೊರೋನಾ ವಿರುದ್ದದ ಬೂಸ್ಟರ್ ಡೋಸ್ ನೀಡಿಕೆಗೆ ಚಾಲನೆ ನೀಡಲಾಯಿತು.


ವಿಶ್ವವನ್ನೇ ಕಾಡಿದ ಮಹಾಮಾರಿ ಕೊರೋನಾದ ವಿರುದ್ದ ಆರೋಗ್ಯ ಯುದ್ಧವನ್ನು ಸಾರುವ ಮೂಲಕ ಭಾರತವು ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಕೊರೋನಾ ತಡೆಯುವಲ್ಲಿ ಪ್ರತೀ ಹಂತದಲ್ಲೂ ಯಶಸ್ವಿಯಾಗಿದೆ. ಇದೀಗ ಅತೀ ಅಗತ್ಯವುಳ್ಳವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡಲು ಸರಕಾರ ಮುಂದಾಗಿದೆ ಎಂದು ಉದ್ಘಾಟಿಸಿದ ಪುತ್ತೂರು ನಗರಸಭಾಧ್ಯಕ್ಷ ಕೆ. ಜೀವಂಧರ್ ಜೈನ್ ಹೇಳಿದರು. ಆರಂಭಿಕವಾಗಿ ವಾರಿಯರ್ಸ್‍ಗಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.


ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜೈನಾಭ, ಮೂರನೇ ಅಲೆಯನ್ನು ತಡೆಯಲು ಬೂಸ್ಟರ್ ಡೋಸ್‍ನ್ನು ನೀಡಲು ಮುಂದಾಗಿದೆ. ಹಿಂದೆ ಎರಡು ಡೋಸ್ ಲಸಿಕೆ ಪಡೆದವರು ಎರಡನೇ ಡೋಸ್ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಬಹುದು. ಹೃದ್ರೋಗ, ಡಯಾಬಿಟಿಸ್, ರಕ್ತದೊತ್ತಡ ಕಾಯಿಲೆಯಿಂದ ಬಳಲುವವರು ಬೂಸ್ಟರ್ ಡೋಸ್ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.


ವೇದಿಕೆಯಲ್ಲಿ ನಗರಸಭಾ ಉಪಾಧ್ಯಕ್ಷೆ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ ವಿದ್ಯಾ ಆರ್. ಗೌರಿ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ರಫೀಕ್ ದರ್ಬೆ, ಡಾ. ಕೃಷ್ಣ ಪ್ರಸನ್ನ ಉಪಸ್ಥಿತರಿದ್ದರು.


ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಸ್ವಾಗತಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post