ಮಂಗಳೂರು: ಯುವಜನತೆಗೆ ಕಾನೂನಿನ ಜ್ಞಾನವಿರಬೇಕು. ಹುಟ್ಟಿನಿಂದ ಸಾವಿನವರೆಗೆ ಕಾನೂನು ಪಾಲಿಸಬೇಕು. ಜೀವನದಲ್ಲಿ ಎದುರಾಗುವ ಸೋಲುಗಳಿಗೆ ಹೆದರದೆ ಅವುಗಳನ್ನೇ ಗೆಲುವಿನ ಮೆಟ್ಟಿಲಾಗಿ ಪರಿವರ್ತಿಸಬೇಕು, ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪೃಥ್ವಿರಾಜ್ ವರ್ಣೇಕರ್ ಹೇಳಿದರು.
ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತಾಶ್ರಯದಲ್ಲಿ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಯುವ ಜನತೆಯಲ್ಲಿ ಕಾನೂನಿನ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ ಎ, ಯುವಜನೆತೆಯು ಕಾನೂನಿನ ಬಗ್ಗೆ ಸ್ವತಂತ್ರವಾಗಿ ಚಿಂತನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಹಾಗೂ ಮಾನವೀಯತೆ ನಮ್ಮಲ್ಲಿ ಸದಾ ಇರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಹರೀಶ ಎ, ದೇಶಸೇವೆ ಮಾಡುವ ಹಂಬಲ ನಮ್ಮಲ್ಲಿ ಸದಾ ಇರಲಿ ಆಶಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ. ಸುರೇಶ್ ಮತ್ತು ಡಾ. ಗಾಯತ್ರಿ ಎನ್, ಅರ್ಥಶಾಸ್ತ್ರ ಉಪನ್ಯಾಸಕ ಧೀರಜ್, ಜೊತೆಗೆ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಸಮಾಜಶಾಸ್ತ್ರ ಉಪನ್ಯಾಸಕಿ ಡಾ.ರಾಜೇಶ್ವರಿ ಅತಿಥಿಗಳನ್ನು ಸ್ವಾಗತಿಸಿದರು. ಶಿವಪ್ರಸಾದ್ ನಿರೂಪಿಸಿ, ಅನುಷಾ ಧನ್ಯವಾದ ಸಮರ್ಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ