ವಿವೇಕಾನಂದ ಜಯಂತಿ ಆಚರಣೆ

Upayuktha
0

 

ಪುತ್ತೂರು ಜ.12: ಯುವ ಜನತೆಗೆ ಸ್ವಾಮಿ ವಿವೇಕಾನಂದರ ಚಿಂತನೆ ಮತ್ತು ಪ್ರೇರಣೆಗಳು ಆದರ್ಶವಾಗಬೇಕು. ವ್ಯಕ್ತಿಯು ಜೀವನವನ್ನು ಹೇಗೆ ನಡೆಸಬೇಕು ಎಂದು ಹೇಳಿದಂತಹ ದೇಶ ಭಾರತ. ಅದಕ್ಕೆ ಪುಷ್ಠಿ ಕೊಟ್ಟವರು ಸ್ವಾಮಿ ವಿವೇಕಾನಂದರು ಎಂದು ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.


ಅವರು ವಿವೇಕಾನಂದ ಜಯಂತಿ ಪ್ರಯುಕ್ತ ಇಲ್ಲಿನ ನೆಹರೂನಗರದ ವಿವೇಕಾನಂದ ಕ್ಯಾಂಪಸ್‌ನ ಆರಂಭದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಯ ಮುಂದೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಮತ್ತು ಮಾಲಾರ್ಪಣೆ ಮಾಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಬುಧವಾರ ಮಾತನಾಡಿದರು.


ಜಗತ್ತಿನ ಕೇಂದ್ರಬಿಂದು ಅಲ್ಪ ಸಮಯದವರೆಗೂ ಅಮೆರಿಕವಾಗಿತ್ತು. ಆದರೆ ಈಗ ಭಾರತ ಕೇಂದ್ರ ಸ್ಥಾನವನ್ನು ಪಡೆದು ಮೆರೆಯುತ್ತಿದೆ. ನಮ್ಮ ದೇಶವನ್ನು ಭೌಗೋಳಿಕವಾಗಿ ರಕ್ಷಣೆ ಮಾಡುವುದು ನಮ್ಮ ಸೈನ್ಯ. ಕಷ್ಟದ ಸಂದರ್ಭದಲ್ಲಿ ಸೈನಿಕರು ನಮ್ಮನ್ನು ರಕ್ಷಣೆ ಮಾಡುತ್ತಾರೆ. ಅವರ ಸಮರ್ಪಣೆ ಅದ್ಭುತ. ಹಾಗಾಗಿ ಸೈನಿಕರನ್ನು ಗುರುತಿಸಿ, ಗೌರವಿಸಿ ಅವರನ್ನು ನೆನಪಿಸಿಕೊಂಡು ಕೃತಜ್ಞತೆಯನ್ನು ಸಲ್ಲಿಸಬೇಕು. ಹಾಗೆಯೇ ಜಗತ್ತಿಗೆ ಆಧ್ಯಾತ್ಮಿಕ ಚಿಂತನೆಯನ್ನು ಕೊಟ್ಟವರು ಸ್ವಾಮಿ ವಿವೇಕಾನಂದರು. ನಾವು ಅವರ ಆಧ್ಯಾತ್ಮಿಕ ಚಿಂತನೆಗಳನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿರಿಯರು, ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಪ್ರಮುಖರು, ಪ್ರಾಚಾರ್ಯರು. ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top