|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

 

ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ ಅಗತ್ಯ: ಪ್ರೊ. ವಿಷ್ಣುಗಣಪತಿ ಭಟ್


ಪುತ್ತೂರು ಜ.17: ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಚಿಂತನೆಯನ್ನು ನೀಡುವುದೇ ನಮ್ಮ ವಿದ್ಯಾಸಂಸ್ಥೆಯ ಧ್ಯೇಯ. ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದರ ಜೊತೆಗೆ ತಮ್ಮ ಗುರಿಯನ್ನು ತಲುಪಲು ಮಾರ್ಗದರ್ಶನ ನೀಡುವುದು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉದ್ದೇಶವಾಗಿದೆ. ವಿದ್ಯಾರ್ಥಿಗಳು ತಾವು ಆಯ್ಕೆ ಮಾಡಿಕೊಂಡ ವಿಷಯವನ್ನು ಇಷ್ಟಪಟ್ಟು ಕಲಿಯಬೇಕು. ಪರೀಕ್ಷೆಗಳನ್ನು ಎದುರಿಸಲು ಇಲ್ಲಿನ ಉಪನ್ಯಾಸಕರು ಸಹಕರಿಸುತ್ತಾರೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿಷಯಗಳನ್ನು ಅಧ್ಯಯನ ಮಾಡಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು.


ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ 'ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ'ದಲ್ಲಿ ಸೋಮವಾರ ಅವರು ಮಾತನಾಡಿದರು.


ವಿದ್ಯಾರ್ಥಿಗಳ ಏಕಾಗ್ರತೆಯ ದಿಕ್ಕು ತಪ್ಪಿಸುವ ಅನೇಕ ಸಂಗತಿಗಳಿವೆ. ಅಂತಹ ವಿಚಾರಗಳಿಂದ ವಿದ್ಯಾರ್ಥಿಗಳು ದೂರವಿರಬೇಕು. ಮೊಬೈಲ್ ಫೋನ್‌ಗಳನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬಳಸಿದರೆ ಅದು ವರವಾಗಿ ಸಹಕರಿಸುತ್ತದೆ. ಸಂವಹನ ಕಲೆ, ವ್ಯಕ್ತಿತ್ವ ವಿಕಸನ, ಸ್ಪರ್ಧಾತ್ಮಕ ಪರೀಕ್ಷೆಗಳು ಮುಂತಾದ ಸಂಗತಿಗಳ ಕುರಿತು ತಿಳಿಯುವುದರಲ್ಲಿ ಮೊಬೈಲ್ ಫೋನ್ ಹೆಚ್ಚು ಉಪಯುಕ್ತವಾಗಿದೆ. ಇದರ ಜೊತೆಗೆ ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಂಡು ದೇಶದಲ್ಲಿನ ಆಗುಹೋಗುಗಳ ಬಗೆಗೆ ತಿಳಿದುಕೊಳ್ಳಬೇಕು. ಕಾಲೇಜಿನ ಗ್ರಂಥಾಲಯದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ನುಡಿದರು.


ಪಠ್ಯಗಳ ವಿಚಾರದ ಹೊರತಾಗಿ, ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಕಾಲೇಜು ಹಲವು ಸ್ಫರ್ಧೆಗಳನ್ನು, ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಸಂವಹನ ಅನ್ನುವುದು ಎಲ್ಲಾ ಕ್ಷೇತ್ರಗಳಲ್ಲಿಯೂ ಬಹಳ ಅಗತ್ಯವಾಗಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂವಹನ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಚಟುವಟಿಕೆಗಳು ಮುಂದೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಕರಿಯಾಗುತ್ತದೆ ಎಂದರು.


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ರಸಾಯನ ವಿಭಾಗದ ಮುಖ್ಯಸ್ಥೆ ರಚನಾ ಕುಂದರ್, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರತೀಕ್ ಉಪಸ್ಥಿತರಿದ್ದರು.


ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ ಸ್ವಾಗತಿಸಿ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ತಾರಾ ಕೆ ವಂದಿಸಿದರು. ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಪ್ರೀತಿ ಕಾರ್ಯಕ್ರಮ ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم