ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗ, ಐಕ್ಯೂಎಸಿ ಹಾಗೂ ವಾಣಿಜ್ಯ ಸಂಘ ಇವುಗಳ ಜಂಟಿ ಆಶ್ರಯದಲ್ಲಿ, " How to excel in PPT " ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರವು ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಮುಕುಂದ ಕೃಷ್ಣ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Power Point Presentation ಮೂಲಕ ಅತ್ಯಂತ ಪರಿಣಾಮಕಾರಿಯಾಗಿ ಹೇಗೆ ವಿಷಯವನ್ನು ಪ್ರಸ್ತುತಪಡಿಸಬಹುದು ಎಂದು ವಿವರಿಸಿದರು.
ವಾಣಿಜ್ಯ ಸಂಘದ ಸಹ ಸಂಯೋಜಕರಾದ ಜ್ಯೋತಿ ಎಂ ಎಂ ಸ್ವಾಗತಿಸಿ, ಅಂಕಿತ ವಂದಿಸಿದರು. ವಿನುತಾ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ