ಅಂಬಿಕಾದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Upayuktha
0

 

ಪುತ್ತೂರು: ತಮ್ಮ ವಿದ್ಯಾರ್ಥಿ ಜೀವನದ ಅತ್ಯಂತ ನಿರ್ಧಾರಕ ಘಟ್ಟದಲ್ಲಿ ಇರುವ ವಿದ್ಯಾರ್ಥಿಗಳು ತಮ್ಮ ಮುಂದಿನ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿಕೊಂಡು ಇತರ ಆಕರ್ಷಣೆಗಳಿಗೆ ಒಳಗಾಗದೆ ಮುಂದಡಿ ಇಡಬೇಕೆಂದು ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಇವರು ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿ.ಯು. ವಿದ್ಯಾರ್ಥಿಗಳಿಗಾಗಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಸಾಧನೆಯ ಕಡೆಗೆ ಮುಂದಡಿ ಇಡುವ ಬಗ್ಗೆ ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಇವರು ಉಪಸ್ಥಿತರಿದ್ದರು. ಗಣಿತಶಾಸ್ತ್ರ ಉಪನ್ಯಾಸಕಿ ರಮ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top