ಪುತ್ತೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ ಕಳೆದ ಡಿಸೆಂಬರ್ 13,15,17 ಮತ್ತು 19 ರಂದು ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2019-21 ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳಾದ ಅಂಬಾತನಯ ಎ, ಸ್ವರೂಪ್‌ರೂಪೇಶ್, ಮೋಕ್ಷಿತ್‌ಕುಮಾರ್, ಅನುಶ್, ರಾಮಚಂದ್ರ ವಿದ್ಯಾಸಾಗರ್, ಸುಹಾಸ್ ಎಚ್ ನಾಯಕ್, ತೇಜಸ್ ಕೆ, ಧನುಶ್ ಬಿ, ಗ್ರೀಷ್ಮ ಆರ್ ಆಳ್ವ ತೇರ್ಗಡೆಯಾಗುವುದರ ಮೂಲಕ ಮುಂದಿನ ಹಂತದ ಸಿ ಎ ಇಂಟರ್‌ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ.
ಹಾಗೆಯೇ 2012-14 ನೇ ಸಾಲಿನ ವಿದ್ಯಾರ್ಥಿಗಳಾದ ಮಧುಶ್ರೀ ಎಸ್ ದಾಸ್ ಮತ್ತು ವೈಶಾಲಿ ಸಿ ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಸಿಎ ಆಕಾಂಕ್ಷಿಗಳಿಗೆ ವಿಶೇಷ ತರಬೇತಿ ವ್ಯವಸ್ಥೆಯನ್ನು ಕಾಲೇಜಿನ ವತಿಯಿಂದ ಕಲ್ಪಿಸಿಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯದ ಜೊತೆಗೆ ಸಿಎ ಪರೀಕ್ಷೆಗೆ ಬೇಕಾದ ಸಕಲ ತರಬೇತಿ ಕಾರ್ಯವನ್ನೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ