ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ಆಳ್ವಾಸ್ ಕ್ರೀಡಾಪಟುಗಳ ದಿಗ್ವಿಜಯ

Upayuktha
0

 

ಮೂಡುಬಿದಿರೆ: ಚೆನ್ನೈನ ಎಸ್.ಆರ್.ಎಂ. ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಮಂಗಳೂರು ವಿವಿ 11ನೇ ಬಾರಿ ತನ್ನ ಮುಡಿಗೇರಿಸಿಕೊಂಡಿತು.


ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಎಲ್ಲಾ 10 ಮಂದಿ ಆಟಗಾರರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಉಚಿತ ಶಿಕ್ಷಣ ಯೋಜನೆಯಡಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಈ ಚಾಂಪಿಯನ್‌ಶಿಪ್‌ ಅನ್ನು ಮಂಗಳೂರು ವಿವಿಯು ಸತತ 7ನೇ ಬಾರಿ ಜಯಿಸಿದ್ದಲ್ಲದೆ, 17 ಬಾರಿ ಲೀಗ್ ಹಂತಕ್ಕೆ ತಲುಪಿತ್ತು. ಈ ಕ್ರೀಡಾಪಟುಗಳು ಮುಂದಿನ ವಾರ ಮೂಡಬಿದ್ರೆಯಲ್ಲಿ ನಡೆಯಲಿರುವ 67ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.


ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಶ್ಲಾಘಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


free website counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top