ಮಾದಕದ್ರವ್ಯ ವಿರೋಧಿ ಕಾರ್ಯಾಗಾರ

Upayuktha
0

 

ಮಂಗಳೂರು: ಮಂಗಳೂರು ನಗರ ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಶೋಕನಗರದ ಡಿ ದೇವರಾಜ ಅರಸು ಬಾಲಕರ ವಸತಿ ನಿಲಯದಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವಿರೋಧಿ ಕಾರ್ಯಾಗಾರ ಹಮ್ಮಿಕೊಂಡಿತ್ತು.


ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಉರ್ವ ಪೊಲೀಸ್ ಠಾಣೆಯ ಪಿ.ಎಸ್.ಐ ಧನರಾಜ್, 'ವಿದ್ಯಾರ್ಥಿಗಳು ಮಾದಕದ್ರವ್ಯದ ವ್ಯಸನಿಗಳಾದರೆ ಭವಿಷ್ಯ ಬರಡಾಗುತ್ತದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ' ಎಂದು ವಿದ್ಯಾರ್ಥಿಗಳನ್ನು ಎಚ್ಚರಿಸಿದರು.


ಉರ್ವ ಪೊಲೀಸ್ ಠಾಣೆಯ ಎ.ಎಸ್.ಐ ವಿನಯ್ ಕುಮಾರ್ ಮಾತನಾಡಿ, ಕರ್ನಾಟಕ ಸರ್ಕಾರ ಅಪರಾಧಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು 112 ಸಹಾಯವಾಣಿ ಆರಂಭಿಸಿದೆ ಸಾರ್ವಜನಿಕರು ಯಾವುದೇ ದೂರುಗಳನ್ನು ಈ ಮೂಲಕ ದಾಖಲಿಸಿದರೆ ಹದಿನೈದು ನಿಮಿಷಗಳಲ್ಲಿ ಪರಿಹಾರ ದೊರೆಯುತ್ತದೆ, ಎಂದರು.


ಕಾರ್ಯಾಗಾರದಲ್ಲಿ ನಿಲಯದ ಮೇಲ್ವಿಚಾರಕ ಹೇಮಂತ್ ಕುಮಾರ್, ಅಡುಗೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ರವಿ ಎಂ, ಕೆ ವೆಂಕಟೇಶ್, ಪ್ರಜ್ವಲ್, ನಿಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಂಕರ್ ಓಬಳಬಂಡಿ ಕಾರ್ಯಕ್ರಮ ನಿರೂಪಿಸಿದರೆ, ಪ್ರತೀಕ್ ಧನ್ಯವಾದ ಸಮರ್ಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top