ರಾಷ್ಟ್ರಮಟ್ಟದ ಎನ್.ಟಿ.ಎಸ್.ಇ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಶ್ರಯ ಪಿ. ತೇರ್ಗಡೆ

Upayuktha
0

ಪುತ್ತೂರು: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತುತರಬೇತಿ ಪರಿಷತ್ತು (ಎನ್.ಸಿ.ಇ.ಆರ್.ಟಿ) ವತಿಯಿಂದ ಕಳೆದ ಅಕ್ಟೋಬರ್ 24 ರಂದು ನಡೆದ ರಾಷ್ಟ್ರ ಮಟ್ಟದ ಎನ್.ಟಿ.ಎಸ್.ಇ ಎರಡನೇ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶ್ರಯ ಪಿ ರವರು ತೇರ್ಗಡೆ ಹೊಂದಿದ್ದಾರೆ.


ಈ ಮೂಲಕ ಎನ್.ಟಿ.ಎಸ್.ಇ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇ.93 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದು, ಗೈಡ್ಸ್ ತಂಡದ ಸಕ್ರಿಯ ಸದಸ್ಯೆಯಾಗಿರುವ ಈಕೆ ಬಹುಮುಖ ಪ್ರತಿಭೆಯ ವಿದ್ಯಾರ್ಥಿನಿ.


ಈಕೆ ಪುತ್ತೂರಿನ ಚೇತನ ಸ್ಟುಡಿಯೋದ ಮಾಲಕ ಅಶೋಕ್‌ ಕುಂಬ್ಳೆ ಮತ್ತು ಶೋಭಾ ಬಿ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top