ಮೂಡುಬಿದಿರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 25 ವರ್ಷಗಳ ಕಾಲ ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿರುವ ಪುತ್ತೂರು ಘಟಕದ ಚಾಲಕ ಬಿ. ಕೇಶವ ಗೌಡ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನವು ಇತ್ತೀಚೆಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಿತು.
ಪುತ್ತೂರು ತಾಲೂಕಿನ ನರಿಮೊಗರಿನ ನಿವಾಸಿಯಾಗಿರುವ ಇವರು ತಮ್ಮ ನಿವೃತ್ತಿಯ ಬಳಿಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಾಲೇಜು ಬಸ್ ಚಾಲಕರಾಗಿ ಸೇರ್ಪಡೆಗೊಂಡಿದ್ದಾರೆ. ಇವರು ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ