ಬೆಂಗಳೂರು: ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಇವರು ಪ್ರಸ್ತುತ ಪಡಿಸಿದ ಯಕ್ಷಗಾನ "ಭಕ್ತ ಸುಧನ್ವ" ಕಾರ್ಯಕ್ರಮ ಭಾನುವಾರದಂದು (ಫೆ.6) ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಯಕ್ಷಗಾನ ವಿದ್ವಾಂಸರಾದ ಮಟ್ಟಿ ರಾಮಚಂದ್ರ ರಾವ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷಗಾನ ವಿದ್ವಾಂಸರಾದ ಎ.ಪಿ ಪಾಠಕ್, ಕರ್ನಾಟಕ ಕಲಾದರ್ಶಿನಿ ಸಂಸ್ಥೆಯ ಸ್ಥಾಪಕರಾದ ಶ್ರೀನಿವಾಸ ಸಾಸ್ತಾನ್ ಉಪಸ್ಥಿತರಿದ್ದರು. ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಈ ತಂಡದ ಕಾರ್ಯದರ್ಶಿ ಕೆ. ಗೌರಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಭಕ್ತ ಸುಧನ್ವ ಕಾರ್ಯಕ್ರಮ ಬಹಳ ಸೊಗಸಾಗಿ ಮೂಡಿಬಂತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಹ್ಮಣ್ಯ ನಾವುಡ, ವಿನಯ್ ಶೆಟ್ಟಿ, ಮೃದಂಗದಲ್ಲಿ ರಾಘವೇಂದ್ರ ಬಿಡುವಾಳ, ಸಂಪತ್, ಗೌತಮ್ ಸಾಸ್ತಾನ್, ಚಂಡೆಯಲ್ಲಿ ನರಸಿಂಹ ಆಚಾರ್ ಸಹಕರಿಸಿದರು.
ಮುಮ್ಮೇಳದಲ್ಲಿ ಕೆ. ಗೌರಿ, ಶಶಿಕಲಾ, ಆಶಾ ರಾಘವೇಂದ್ರ, ಸುಮಾ ಅನಿಲ್, ಚಂದ್ರಿಕಾ ಧರ್ಮೇಂದ್ರ, ಅನಿತಾ ರಾವ್, ಚೈತ್ರ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ ನಾವುಡ, ಶರ್ವಾಣಿ ಹೆಗಡೆ, ಭೂಮಿಕಾ ಐತಾಳ್, ಧೃತಿ ಅಮ್ಮೆಂಬಳ ಕಾಣಿಸಿಕೊಂಡರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ