ಮಂಗಳೂರು ವಿವಿ: ನಾಳೆ (ಫೆ. 23) ಸ್ವಯಂಪ್ರೇರಿತ ರಕ್ತದಾನ ಶಿಬಿರ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ, ʼಮಂಗಳ ಯೋಜನೆʼ ಗ್ರಾಮ ದತ್ತು ಸ್ವೀಕಾರ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಅಸೈಗೋಳಿ) ಜಂಟಿ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಫೆಬ್ರವರಿ 23 (ಬುಧವಾರ) ರಂದು ಮುಂಜಾನೆ 9 ಗಂಟೆಯಿಂದ  5 ಗಂಟೆಯವರೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.  


ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಮಂಗಳೂರು ವಿವಿಯ ಕುಲಸಚಿವ (ಆಡಳಿತ) ಪ್ರೊ. ಕಿಶೋರ್ ಕುಮಾರ್ ಸಿ ಕೆ ವಿಶ್ವವಿದ್ಯಾನಿಲಯದ ರಕ್ತದಾನಿಗಳ ವೆಬ್ ಪೋರ್ಟಲ್ ಬಿಡುಗಡೆ ಮಾಡಲಿದ್ದಾರೆ. ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ರೈ ಕಲ್ಲಿಮಾರು ʼರಕ್ತದಾನ ಮಹಾದಾನ- ವೈಜ್ಞಾನಿಕ ಮಾಹಿತಿʼ ಎಂಬ ಕೈಪಿಡಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.  


ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಅಸೈಗೋಳಿ) 7 ನೇ ಬೆಟಾಲಿಯನ್‌ನ ಕಮಾಂಡೆಂಟ್ ಬಿ ಎಂ ಪ್ರಸಾದ್ ಹಾಗೂ ಮಂಗಳೂರು ರೆಡ್ ಕ್ರಾಸ್ ಸೊಸೈಟಿಯ ಡಾ. ಜೆ ಎನ್ ಭಟ್ ವಿಶೇಷ ಅಭ್ಯಾಗತರಾಗಿರಲಿದ್ದಾರೆ, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




free website counter

Post a Comment

0 Comments
Post a Comment (0)
To Top