ಮಂಗಳೂರು: ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾದ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಪ್ರಧಾನ ಸಂಚಾಲಕ ಎಂ.ಜಿ.ಆರ್ ಅರಸ್, ಯುಗಪುರುಷ ಮಾಸ ಪತ್ರಿಕೆಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಚುಟುಕು ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕಾ.ವೀ. ಕೃಷ್ಣದಾಸ್, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ದಕ್ಷಿಣ ಕನ್ನಡ ಚುಸಾಪ ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಹಿರಿಯ ಚಿತ್ರನಟ ರಮೇಶ್ ಭಟ್, ಹಿರಿಯ ನಟಿ ರಾಧಾ ರಾಮಚಂದ್ರ, ಹಿರಿಯ ಸಾಹಿತಿ ಎಕ್ಕಾರು ಉಮೇಶ್ ರಾವ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ್ ಶೆಟ್ಟಿ, ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊಫೆಸರ್ ಪಿ. ಕೃಷ್ಣಮೂರ್ತಿ, ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಹಂಸಕಾವ್ಯ ಪ್ರಶಸ್ತಿ ಪುರಸ್ಕೃತ ಕವಿ ರಘು ಇಡ್ಕಿದು, ಕಲ್ಲಚ್ಚು ಪ್ರಕಾಶನದ ಅಧ್ಯಕ್ಷ ಮಹೇಶ್ ಆರ್ ನಾಯಕ್, ಕವಯಿತ್ರಿ ಶಿಕ್ಷಕಿ ವಿಜಯಲಕ್ಷ್ಮೀ ಕಟೀಲು, ಸಂಘಟಕ ಉದ್ಯಮಿ ಗುರುಪ್ರಸಾದ್ ಕಡಂಬಾರ್, ಟೈಮ್ಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಗಣೇಶ್ ಹೆಬ್ಬಾರ್ ಮೊದಲಾದ ಗಣ್ಯರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ