ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

Upayuktha
0

 


ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು - 3 ಹುದ್ದೆ, ಪಂಚಕರ್ಮ ತಜ್ಞ ವೈದ್ಯರು, ಆರ್.ಎಮ್.ಎನ್.ಸಿ.ಹೆಚ್ ಸಮಾಲೋಚಕರು, ನೇತ್ರ ಸಹಾಯಕರು, ಡೆಂಟಲ್ ಹೈಜಿನಿಸ್ಟ್, ಡೆಂಟಲ್ ಟೆಕ್ನೀಷಿಯನ್ ಮತ್ತು ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪಾಯರ್ಡ್ ಚಿಲ್ಡ್ರನ್ ರ ತಲಾ 1 ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಫೆಬ್ರವರಿ 5 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.


ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Advt Slider:
To Top