ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಏಪ್ರಿಲ್ 27 ರಂದು ಸಂಜೆ 6.50ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಇದರ ನೋಂದಣಿ ಕಛೇರಿಯನ್ನು ಆದಿತ್ಯವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಹಾಗೂ ಧರ್ಮೋತ್ಥಾನ ಟ್ರಸ್ಟ್ ಇದರ ಕಾರ್ಯದರ್ಶಿಯವರಾದ ಶ್ರೀ ಎ.ವಿ. ಶೆಟ್ಟಿಅವರು ಉದ್ಘಾಟಿಸಿ ಶುಭ ಹಾರೈಸಿದರು.
ದೇವಳದ ಪಾರುಪತ್ಯಗಾರ್ ಶ್ರೀ ಲಕ್ಷ್ಮಿನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ಶ್ರೀನಿವಾಸ ರಾವ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಧನಕೀರ್ತಿ ಆರಿಗ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಧರ್ಣಪ್ಪ ಮಾಸ್ಟರ್, ಶ್ರೀ ಮಹಾವೀರ ಅಜ್ರಿ ಮತ್ತು ಊರ ಮಹನೀಯರು ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ದೂರವಾಣಿ 08256-266644
ವಾಟ್ಸಪ್ ನಂ. 9663464648
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ