ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಕೊಂಕಣಿ ಭವನದ ಶಿಲಾನ್ಯಾಸ ಸಮಾರಂಭ ಶನಿವಾರ (ಫೆ.26) ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಇಂಧನ ಖಾತೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಶಿಲಾನ್ಯಾಸ ಮಾಡಲಿದ್ದಾರೆ.
ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ. ಕೆ. ಜಗದೀಶ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೆ, ಚಿಕ್ಕಮಗಳೂರು ಶಾಸಕ ಸಿ.ಟಿ ರವಿ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹಾಗೂ ಉರ್ವಾ ಸ್ಟೋರ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್ ಭಾಗವಹಿಸಲಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ