ಮಂಗಳೂರು: ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿ 12 (ಶನಿವಾರ) ರಂದು ಸಂಜೆ 5 ಗಂಟೆಗೆ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ತುಳುವರ ಸಾಂಪ್ರದಾಯಿಕ ಆಚರಣೆ ಕೆಡ್ಡಸದ ಮೇಲೆ ಬೆಳಕು ಚೆಲ್ಲುವ 'ಕೆಡ್ಡಸ ಮಿನದನ' ಕಾರ್ಯಕ್ರಮ ಮತ್ತು ಪುಸ್ತಕ ಬಿಡುಗಡೆ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರೆ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ 'ತುಳುವ ಪಾರಂಪರಿಕ ಜ್ಞಾನ' ಮತ್ತು 'ಬೊಳ್ಳಿ ಸಂಭ್ರಮೊ' ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ನ್ಯಾಯವಾದಿ ಎಂ ಕೆ ಸುವೃತ ಕುಮಾರ್ ಮುಖ್ಯ ಅತಿಥಿಗಳಾಗಿರಲಿದ್ದಾರೆ. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಲಹಾಮಂಡಳಿ ಸದಸ್ಯ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ವಿಜಯಲಕ್ಷ್ಮೀ ಪ್ರಸಾದ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ, ಎಂದು ತುಳು ಪೀಠದ ಸಂಯೋಜಕ ಡಾ. ಮಾಧವ ಎಂ. ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ