ಮಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಯೋಜನೆಯಡಿ 2019-20 ನೇ ಸಾಲಿನಲ್ಲಿ ಆಯ್ಕೆಯಾಗಿದ್ದ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ 22 ಮಂದಿ ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿ 12 ಮಂದಿಗೆ ಬುಧವಾರ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.
ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್ಸಿ ಎಸ್ಟಿ ಸೆಲ್ನ ವಿಶೇಷಾಧಿಕಾರಿ ಡಾ. ಪುಟ್ಟಣ್ಣ ಕೆ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿ ಶುಭ ಕೋರಿದರು. ಗೈರು ಹಾಜರಾಗಿದ್ದ 10 ಮಂದಿಗೆ ವಿವಿಯಲ್ಲೇ ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಇದರೊಂದಿಗೆ 2019- 20 ನೇ ಸಾಲಿನ ಲ್ಯಾಪ್ ಟಾಪ್ ವಿತರಣೆ ಮುಗಿದಂತಾಗಿದೆ. ವಿಶ್ವವಿದ್ಯಾನಿಲಯ 378 ಅತ್ಯಾಧುನಿಕ ಲ್ಯಾಪ್ ಟಾಪ್‌ಗಳನ್ನು ಖರೀದಿಸಲು ನಿರ್ಧರಿಸಿದ್ದು, 200 ನ್ನು ಈಗಾಗಲೇ ಖರೀದಿಸಲಾಗಿದೆ ಮತ್ತು 178 ಕಂಪ್ಯೂಟರ್‌ಗಳನ್ನು ಖರೀದಿಸಬೇಕಾಗಿದೆ.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮೊದಲಾದವರು ಹಾಜರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ