ಮಂಗಳೂರು ವಿವಿ: ಸುಸಜ್ಜಿತ ಕಂಪ್ಯೂಟರ್ ಕೇಂದ್ರ ಉದ್ಘಾಟನೆ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಕಂಪ್ಯೂಟರ್ ಕೇಂದ್ರವನ್ನು ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಬುಧವಾರ ಉದ್ಘಾಟಿಸಿದರು. 


ವಿಶ್ವವಿದ್ಯಾನಿಲಯದ ನ್ಯೂ ಫ್ಯಾಕಲ್ಟಿ ಕಟ್ಟಡದ ನೆಲಮಾಳಿಗೆಯಲ್ಲಿ ನಿರ್ಮಿಸಲಾಗಿರುವ ಈ ಕಂಪ್ಯೂಟರ್ ಕೇಂದ್ರದಲ್ಲಿ ಸುಮಾರು 88 ಕಂಪ್ಯೂಟರ್ಗಳಿದ್ದು, ಇಂಟರ್ನೆಟ್, ಓವರ್ ಹೆಡ್ ಪ್ರೊಜೆಕ್ಟರ್ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳಿವೆ. ಇಲ್ಲಿ ಹೊಸ ಕಂಪ್ಯೂಟರ್ಗಳ ಜೊತೆಗೆ ಹಳೆಯ ಸುಸ್ಥಿತಿಯಲ್ಲಿರುವ ಕಂಪ್ಯೂಟರ್‌ಗಳನ್ನೂ ಬಳಸಿಕೊಳ್ಳಲಾಗಿದೆ. “ಪ್ರತಿಯೊಂದು ವಿಭಾಗಕ್ಕೂ ಪ್ರತ್ಯೇಕ ಪ್ರಯೋಗಾಲಯಗಳನ್ನು ಸ್ಥಾಪಿಸುವುದನ್ನು ತಪ್ಪಿಸಲು ಈ ಕೇಂದ್ರೀಯ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರಿಂದ ನಿರ್ವಹಣಾ ವೆಚ್ಚದ ಜೊತೆಗೆ ಮಾನವ ಸಂಪನ್ಮೂಲದ ಸದ್ಭಳಕೆ ಸಾಧ್ಯ,” ಎಂದು ಕುಲಪತಿ ಅಭಿಪ್ರಾಯಪಟ್ಟರು.  


ಕುಲಸಚಿವ (ಆಡಳಿತ) ಡಾ. ಕಿಶೋರ್ ಕುಮಾರ್ ಸಿ ಕೆ ಶುಭಾಶಯ ಕೋರಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ, ಕಂಪ್ಯೂಟರ್ ಕೇಂದ್ರದ ಜವಾಬ್ದಾರಿ ಹೊತ್ತಿರುವ ಪ್ರೊ. ಹೆಚ್.ಎಲ್ ಶಶಿರೇಖಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top