ಮಂಗಳೂರು ವಿವಿ: ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 2020-21ನೇ ಸಾಲಿನಲ್ಲಿ ವಿವಿಧ ಪದವಿ ಪರೀಕ್ಷೆಗಳ ಫಲಿತಾಂಶ ವಿಳಂಬವಾದ ಹಿನ್ನೆಲೆಯಲ್ಲಿ ಹಾಗೂ ವಿಶೇಷ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶೈಕ್ಷಣಿಕ ವರ್ಷ 2021-22 ನೇ ಸಾಲಿನ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ, ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಹಂಪನಕಟ್ಟೆ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರ್ಕಾರಿ ಕೋಟಾ ಸೀಟುಗಳಿಗೆ) ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 7 ಕೊನೆಯ ದಿನವಾಗಿದೆ.


ಸಂಯೋಜಿತ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ ಕಾರ್ಯಕ್ರಮಗಳ ಸರ್ಕಾರಿ ಕೋಟಾದ ವಿದ್ಯಾರ್ಥಿಗಳಿಗೆ (ಕರ್ನಾಟಕದ ವಿದ್ಯಾರ್ಥಿಗಳಿಗೆ ಮಾತ್ರ) ಅರ್ಜಿ ನೀಡಲಾಗುವುದು. ಸರ್ಕಾರಿ ಕಾಲೇಜುಗಳನ್ನು ಸೇರಲಿಚ್ಚಿಸುವವರು ಆಯಾ ಕಾಲೇಜುಗಳಿಂದ ಅರ್ಜಿ ಪಡೆದು ನಿಗದಿತ ಸಮಯದೊಳಗೆ ಭರ್ತಿಮಾಡಿದ ಅರ್ಜಿಗಳನ್ನು ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಫಲಿತಾಂಶ ವಿಳಂಬವಾದ ಮತ್ತು ವಿಶೇಷ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಈಗಾಗಲೇ ಪ್ರವೇಶ ಪಡೆದ ವಿದ್ಯಾರ್ಥಿಗಳ (merit list/payment list) ಅರ್ಹತಾ ಪಟ್ಟಿಯಲ್ಲಿ ಕಟ್ ಆಫ್ ಅಂಕಗಳಿಗೆ ಸಮಾನ ಅಥವಾ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಿಕೊಂಡು ಸಾಮಾನ್ಯ/ಪಾವತಿ ವರ್ಗದಡಿ ಪ್ರವೇಶಾತಿ ಮಾಡಲಾಗುವುದು. ಸೀಟುಗಳು ಲಭ್ಯವಿದ್ದರೆ ಇತರೆ ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು.


ಶುಲ್ಕ ಸೇರಿದಂತೆ ಹೆಚ್ಚಿನ ವಿವರಗಳಿಗೆ ಆಸಕ್ತರು ವಿಶ್ವವಿದ್ಯಾನಿಲಯದ ಜಾಲತಾಣ www.mangaloreuniversity.ac.in ಗೆ ಭೇಟಿ ನೀಡಬಹುದು, ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top