ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು, ಇದರ ಸದಸ್ಯರ ಮತ್ತು ಸಾಹಿತಿಗಳ ಸಮಾಲೋಚನಾ ಸಭೆ ದಿನಾಂಕ 14-02-2022 ರಂದು ನಗರದ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ಜರುಗಿತು. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ|| ಮಂಜುನಾಥ ರೇವಣ್‌ಕರ್ ಅವರು ಪ್ರಾಸ್ತವಿಕವಾಗಿ ಮಾತನಾಡಿದರು.
ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಸಾಹಿತ್ಯ ಚಟುವಟಿಕೆ ನಡೆಸಲು ಬದ್ಧವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸ ಹೊಸ ಯುವ ಸದಸ್ಯರನ್ನು ಸೇರಿಸಿಕೊಂಡು, ಕ್ರಿಯಾಶೀಲ ಘಟಕವಾಗಿಸಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.
ಸಮಾಜದ ಎಲ್ಲಾ ವರ್ಗದ ಮತ್ತು ಎಲ್ಲಾ ಪ್ರಕಾರದ ಸಾಹಿತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕನ್ನಡ ಸಾಹಿತ್ಯ ಪರಿಷತ್ತು ಇದರ ಚಟುವಟಿಕೆಗಳಿಗೆ ಹೊಸ ಆಯಾಮವನ್ನು ನೀಡುವ ಅನಿವಾರ್ಯತೆ ಇದೆ, ಈ ನಿಟ್ಟಿನಲ್ಲಿ ಶಿರ್ಘ್ರದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಿ ಸಾಹಿತಿಕ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದು ನುಡಿದರು.
ಹಿರಿಯ ಮುತ್ಸದ್ದಿ ಶ್ರೀ ಎಂ. ಬಿ ಪುರಾಣಿಕ್ ಅವರು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಪುನಶ್ಚೇತನಗೊಳಿಸಲು ಬೇಕಾದ ಎಲ್ಲಾ ಸಹಕಾರ ಮತ್ತು ಪ್ರೋತ್ಸಾಹ ನೀಡುತ್ತೇನೆ ಎಂದು ಭರವಸೆ ನೀಡಿದರು. ಖ್ಯಾತ ಸಾಹಿತಿ ಶ್ರೀ ವಸಂತ ಕುಮಾರ್ ಪೆರ್ಲ ಅವರು ಮಾತನಾಡಿ, ಪ್ರತಿ ತಿಂಗಳು ಇಬ್ಬರು ಸಾಹಿತಿಗಳ ಮನೆಗೆ ಭೇಟಿ ನೀಡಿ 'ಮನೆ ಮನೆಗೆ ಕನ್ನಡ ಸಾಹಿತ್ಯ' ಎಂಬ ವಿಶೇಷ ಪರಿಕಲ್ಪನೆಯನ್ನು ಜಾರಿಗೆ ತರಬೇಕು ಎಂದು ಆಶಿಸಿದರು.
ಇನ್ನೋರ್ವ ಹಿರಿಯ ಸಾಹಿತಿ ಶ್ರೀ ಎಂ.ವಿ ನಾವುಡ ಅವರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲಾ ವರ್ಗದ ಜನರನ್ನು ಒಟ್ಟು ಸೇರಿಸಿಕೊಂಡು, ಬರೀ ಸಾಹಿತ್ಯ ಚಟುವಟಿಕೆ ಮಾಡಬೇಕು. ಜನಸಾಮಾನ್ಯರಿಗೂ ಸಾಹಿತ್ಯದ ಬಗ್ಗೆ ಒಲವು, ಪ್ರೀತಿ ಮತ್ತು ಆಸಕ್ತಿ ಹುಟ್ಟಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ ಎಂದು ನುಡಿದರು.
ಡಾ|| ಮುರಲೀ ಮೋಹನ್ ಚೂಂತಾರು ಅವರು ಸ್ವಾಗತ ಭಾಷಣ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕರ‍್ಯಚಟುವಟಿಕೆಗಳ ಬಗ್ಗೆ ಹಿರಿಯ ಸಾಹಿತಿಗಳಾದ ಗುಣಾಜೆ ರಾಮಚಂದ್ರ ಭಟ್, ರಘು ಇಡ್ಕಿದು, ಶಶಿರಾಜ್ ಕಾವೂರ್, ಭಾಸ್ಕರ್ ರೈ ಕುಕ್ಕವಳ್ಳಿ ಮುಂತಾದವರು ತಮ್ಮ ಅಭಿಪ್ರಾಯ ಮಂಡಿಸಿದರು. ಶ್ರೀಮತಿ ಅರುಣ ಕುಮಾರಿ ಇವರು ವಂದನಾರ್ಪಣೆ ಮಾಡಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ