ವಿವಿ ಕಾಲೇಜು: ಮಾತೃಭಾಷಾ ದಿನಾಚರಣೆಯಲ್ಲಿ ತಾಲೂಕು ಕಸಾಪ ಅಧ್ಯಕ್ಷ ಡಾ. ಮಂಜುನಾಥ ರೇವಣಕರ
ಮಂಗಳೂರು: ರಾಷ್ಟ್ರಾಭಿಮಾನ ಮೂಡಿಸಲು ಮಾತೃಭಾಷೆ ಮುಖ್ಯ, ಇದರ ಹೊರತು ಭಾಷೆ ಬೇರೆಯಾದರೂ ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ಎಂದು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಡಾ. ಮಂಜುನಾಥ ರೇವಣಕರ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಭಾಷಾ ಸಂಘ (ಕನ್ನಡ, ತುಳು, ಹಿಂದಿ, ಸಂಸ್ಕೃತ) ಗಳ ಸಹಯೋಗದಲ್ಲಿ ಸೋಮವಾರ ಶಿವರಾಮ ಕಾರಂತ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಮಾತೃಭಾಷಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಭಾಷಾ ಸಹಿಷ್ಣುತೆಗೆ ಒತ್ತು ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ, ಮಾತೃಭಾಷೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಇರಬೇಕು, ಅದನ್ನು ಬೆಳೆಸುವ ನಿಟ್ಟಿನಲ್ಲಿ ನಾವು ಕೈ ಜೋಡಿಸಬೇಕು, ಎಂದರು.
ಕಾರ್ಯಕ್ರಮದಲ್ಲಿ ಕನ್ನಡ, ಸಂಸ್ಕೃತ, ಹಿಂದಿ ಹಾಗೂ ತುಳುಗೀತೆಗಳನ್ನು ಹಾಡಿ ಮಾತೃಭಾಷೆಗಳಿಗೆ ನಮನ ಸಲ್ಲಿಸಲಾಯಿತು. ಹಿಂದಿ ಸಂಘದ ಉಪಾಧ್ಯಕ್ಷೆ ಡಾ.ನಾಗರತ್ನ ಎನ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಳು ಸಂಘದ ಡಾ.ಜಗದೀಶ್ ಸ್ವಾಗತಿಸಿದರು. ಕನ್ನಡ ಸಂಘದ ಡಾ. ಮಾಧವ ಕಾರ್ಯಕ್ರಮ ನಿರೂಪಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಕುಮಾರ ಸುಬ್ರಹ್ಮಣ್ಯ ಭಟ್ ಧನ್ಯವಾದ ಸಮರ್ಪಿಸಿದರು. ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ